Advertisement
ರಾಜ್ಯದಲ್ಲಿ ವಕ್ಫ್ ಕಾನೂನಿನ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ರೈತರ ಆಸ್ತಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಮಿನಿ ವಿಧಾನಸೌಧ ಮುಂಭಾಗ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಅಕ್ರಮವೆಸಗಿ ವಾಪಾಸ್ ನೀಡುವುದು ಅಭ್ಯಾಸವಾಗಿದೆ. ರಾಜ್ಯ ಸರಕಾರದ ವೈಫಲ್ಯ ವಿರುದ್ಧ ಇದು ಆರಂಭದ ಹೋರಾಟ ಮಾತ್ರ ಎಂದರು.
Related Articles
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ರೈತರ ಜಮೀನನ್ನು ವಕ್ಫ್ ಇಲಾಖೆ ವಶಪಡಿಸಿಕೊಂಡಿದೆ. ಬಿಜೆಪಿ ಹೋರಾಟದ ಫಲವಾಗಿ ನೋಟಿಸ್ ಹಿಂಪಡೆಯುವ ಭರವಸೆ ಸರಕಾರದಿಂದ ದೊರೆತಿದೆ. ಹೀಗಾಗಿ ಕಾಂಗ್ರೆಸ್ ಭೂಮಿ ದರೋಡೆಕೋರತನದ ಬಗ್ಗೆ ಜನರು ಜಾಗೃತ ಗೊಂಡು ಪ್ರಶ್ನಿಸಬೇಕಿದೆ. ರೈತರ ಜಮೀನು ಕಬಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅವರು ರಾಜೀನಾಮೆ ನೀಡಬೇಕು ಎಂದರು.
Advertisement
ಭಯದ ವಾತಾವರಣಶಾಸಕ ಡಾ| ಭರತ್ ಶೆಟ್ಟಿ ವೈ. ಮಾತ ನಾಡಿ, ರಾಜ್ಯದಲ್ಲಿ ಎಲ್ಲ ಹಿಂದೂಗಳು ತಮ್ಮ ಜಮೀನಿನ ಆರ್‌ಟಿಸಿ ಪರಿಶೀಲನೆ ಮಾಡಬೇಕಾದ ಭಯದ ವಾತಾವರಣ ಸೃಷ್ಟಿಯಾಗಿದೆ. ಸಾವಿರಾರು ವರ್ಷಗಳ ಹಿಂದಿನ ದೇವಸ್ಥಾನಗಳ ಆಸ್ತಿ ಕೂಡ ವಕ್ಫ್ ಆಸ್ತಿಯಾಗಿ ಪರಿವರ್ತನೆ ಆಗಿದೆ ಎಂದರು. ಮೇಯರ್ ಮನೋಜ್ ಕೋಡಿಕಲ್, ಉಪಮೇಯರ್ ಭಾನುಮತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಬಾಲಕೃಷ್ಣ ಭಟ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ರವಿಶಂಕರ ಮಿಜಾರು, ನಿತಿನ್ ಕುಮಾರ್, ಸುಧೀರ್ ಶೆಟ್ಟಿ, ಪೂರ್ಣಿಮಾ, ವಿಜಯ ಕುಮಾರ್ ಶೆಟ್ಟಿ, ರಮೇಶ್ ಕಂಡೆಟ್ಟು, ರಾಜೇಶ್ ಕೊಟ್ಟಾರಿ, ಜಗದೀಶ ಆಳ್ವ ಭಾಗವಹಿಸಿದ್ದರು.