ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದ್ದಿರುವ ಸಾಧ್ಯತೆ ಇದೆ ಎಂದು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಆರೋಪಿಸಿದ ಬೆನ್ನಲ್ಲೇ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಮತ್ತೊಂದೆಡೆ ಭಾರತ ಸರ್ಕಾರ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ Advisory (ಸಲಹೆ)ಯನ್ನು ಜಾರಿಗೊಳಿಸಿದೆ.
ಇದನ್ನೂ ಓದಿ:Balehonnur;ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ: Video Viral
ಕೆನಡಾದಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ, ಭಾರತ ವಿರೋಧಿ ಚಟುವಟಿಕೆಗಳು ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತೀಯ ಪ್ರಜೆಗಳು ಭಾರತ ವಿರೋಧಿ ಚಟುವಟಿಕೆಗೆ ಗುರಿಯಾಗಿರುವ ಪ್ರದೇಶಗಳಿಗೆ ಪ್ರಯಾಣಿಸದಂತೆ ಸಲಹೆ ನೀಡಿದೆ.
ಭಾರತ ವಿರೋಧಿ ಅಜೆಂಡಾದ ಹಿನ್ನೆಲೆಯಲ್ಲಿ ಕೆನಡಾದಲ್ಲಿ ಭಾರತೀಯ ಸಮುದಾಯ ಮತ್ತು ಭಾರತೀಯ ರಾಯಭಾರಿಗಳನ್ನು ಗುರಿಯಾಗಿರಿಸಿಕೊಂಡು ಬೆದರಿಕೆ ಹಾಕುತ್ತಿರುವುದು ಹೆಚ್ಚಳವಾಗುತ್ತಿರುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆಗೊಳಿಸಿರುವ ಸಲಹೆಯಲ್ಲಿ ವಿವರಿಸಿದೆ.
ಕೆನಡಾದಲ್ಲಿರುವ ಭಾರತೀಯ ಸಮುದಾಯದವರ ಸುರಕ್ಷತೆ ಬಗ್ಗೆ ಆದ್ಯತೆ ನೀಡುವಂತೆ ನಮ್ಮ ರಾಯಭಾರ ಕಚೇರಿ ನಿರಂತರವಾಗಿ ಕೆನಡಾದ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದೆ ಎಂದು ಪ್ರಕಟನೆ ತಿಳಿಸಿದೆ.