Advertisement
ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಅವರು ವಿಷಯ ಪ್ರಸ್ತಾವಿಸಿ, ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳು ಮುಖ್ಯ ವಾಗಿ ಅಂಬಲಪಾಡಿ, ಸಂತೆಕಟ್ಟೆ, ಕರಾ ವಳಿ ಜಂಕ್ಷನ್ ನಲ್ಲಿ ಪಾದಚಾರಿಗಳಿಗೆ ದಾಟಲು ಏನು ಕ್ರಮ ಕೈಗೊಂಡಿದ್ದೀರಿ, ಸರ್ವೀಸ್ ರಸ್ತೆಗಳ ಅವಸ್ಥೆ ಏನು, ಇನ್ನಿತರ ವಿಷಯ ಗಳ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು.ಸಭೆಗೆ ಬಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ವಿಜಯ ಕುಮಾರ್ ಅವರು ಇಂಗ್ಲಿಷ್‌ನಲ್ಲಿ ಹೇಳಿ ಉತ್ತರಿಸುವೆ ಎಂದರು. ಇದಕ್ಕೆ ಸಭಾಧ್ಯಕ್ಷರ ಸಹಿತ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
Related Articles
ಜಿ.ಪಂ.ನ ಎಲ್ಲ ಸಭೆಗಳಲ್ಲಿಯೂ ಪ್ರಮುಖ ಇಲಾಖಾ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಅಭಿವೃದ್ಧಿ ಕಾಮಗಾರಿ, ಯೋಜನೆಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಕೂಡ ಒದಗಿಸುತ್ತಿಲ್ಲ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅವರು ಸಭೆ ಮೊಟಕುಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ಬೇಸರ ವ್ಯಕ್ತಪಡಿಸಿದರು.
ಸಾಮಾನ್ಯ ಸಭೆ, ಕೆಡಿಪಿ ಸಭೆಯಲ್ಲೂ ಮಾಹಿತಿ ಕೇಳಿದರೆ ಒಬ್ಬರೂ ಸರಿಯಾಗಿ ಉತ್ತರಿಸುವುದಿಲ್ಲ. ಕೆಲವು ಅಧಿಕಾರಿಗಳು ಸಭೆಗೂ ಹಾಜರಾಗುವುದಿಲ್ಲ. ಈ ರೀತಿಯಾದರೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ನಡೆಸುವುದಾದರೂ ಹೇಗೆ ಎಂದು ಪ್ರಶ್ನಿಸಿದ ಅವರು, ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ಮೊಟಕುಗೊಂಡ ವಿಶೇಷ ಸಾಮಾನ್ಯ ಸಭೆಯನ್ನು ಮುಂದಿನ ವಾರ ಕರೆಯಲು ನಿರ್ಧರಿಸಲಾಗಿದೆ ಎಂದರು.
Advertisement