ನವ ದೆಹಲಿ : 2.5 ಲಕ್ಷ ಕೋಟಿ ಆಸ್ತಿ ಹಣ ಗಳಿಸುವ ಭಾಗವಾಗಿ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಾದ ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಉಳಿದಿರುವ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.
ಮುಂದಿನ ಆರ್ಥಿಕ ವರ್ಷದೊಳಗಾಗಿ ದೇಶದ ಒಟ್ಟು 13 ವಿಮಾನ ನಿಲ್ದಾಣಗಳ ಖಾಸಗೀಕರಣ ಮಾಡಲು ಯೋಜಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಓದಿ : ತಮಿಳುನಾಡು: ಚುನಾವಣಾ ಪ್ರಚಾರ ಮುಗಿಸಿ ವಾಪಾಸಾಗುತ್ತಿದ್ದ ಕಮಲ್ ಹಾಸನ್ ಮೇಲೆ ದಾಳಿ!
ಬೆಂಗಳೂರು, ದೆಹಲಿ, ಮುಂಬೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳನ್ನು ಈಗಾಗಲೇ ಖಾಸಗಿ ಕಂಪನಿಗಳು ನಿರ್ವಹಿಸುತ್ತಿದ್ದು, ತಮ್ಮ ಪೂರ್ಣ ಪ್ರಮಾಣದ ಷೇರನ್ನು ಕಂಪೆನಿಗಳಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
13 ಎಎಐ (
Airports Authority of India ) ವಿಮಾನ ನಿಲ್ದಾಣಗಳನ್ನು ಈಗಾಗಲೇ ಮುಂದಿನ ಆರ್ಥಿಕ ವರ್ಷ ಮುಗಿಯುವುದರೊಳಗಾಗಿ ಖಾಸಗೀಕರಣ ಮಾಡಲು ನಿರ್ಧರಿಸಿದ್ದು, ಹೆಚ್ಚು ಆಕರ್ಷಕ ಪ್ಯಾಕೇಜ್ ಗಳನ್ನು ರಚಿಸಿ ಲಾಭದಾಯಕ ಹಾಗೂ ಲಾಭರಹಿತ ವಿಮಾನ ನಿಲ್ದಾಣಗಳನ್ನು ಒಟ್ಟುಗೂಡಿಸುವ ಸಾಧ್ಯತೆಗಳನ್ನು ನೋಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೂಡ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಇನ್ನು,ನರೇಂದ್ರ ಮೋದಿಯವರ ಸರ್ಕಾರದ ಅಡಿಯಲ್ಲಿ ಮೊದಲ ಹಂತದ ವಿಮಾನ ನಿಲ್ದಾಣಗಳ ಖಾಸಗೀಕರಣದ ಸಂದರ್ಭದಲ್ಲಿ, ಅದಾನಿ ಗ್ರೂಪ್, ಲಕ್ನೋ, ಅಹಮದಾಬಾದ್, ಜೈಪುರ, ಮಂಗಳೂರು(ಬಜ್ಪೆ)(ಕಳೆದ ನವೆಂಬರ್ ನಲ್ಲಿ ಕರ್ನಾಟಕದ ರಾಜ್ಯದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಹಸ್ತಾಂತರ ಮಾಡಿದ್ದು, ಅದಾನಿ ಕಂಪೆನಿ ಈಗ ಮಂಗಳೂರು ವಿಮಾನ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿದೆ.), ತಿರುವನಂತಪುರ, ಗುವಾಹಟಿಯ ವಿಮಾನ ನಿಲ್ದಾಣಗಳನ್ನು ಅದಾನಿ ಕಂಪೆನಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ.
ಓದಿ : ಸೋಂಕು ಹೆಚ್ಚಳ; ಲಾಕ್‌ಡೌನ್, ಕರ್ಫ್ಯೂ ಚರ್ಚೆ ಮುನ್ನೆಲೆಗೆ : ಸಿಎಂ ಎಚ್ಚರದ ಮನವಿ