Advertisement

ರಾಜ್ಯ ಅನ್ ಲಾಕ್: ರಾತ್ರಿ ಕರ್ಫ್ಯೂ , ವೀಕೆಂಡ್ ಕರ್ಫ್ಯೂ ಬಗ್ಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ

03:18 PM Jun 11, 2021 | Team Udayavani |

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಕೆಲವು ಜಿಲ್ಲಗಳಲ್ಲಿ ನಿಯಮದಲ್ಲಿ ವಿನಾಯತಿ ಮಾಡುವುದಾಗಿ ಸಿಎಂ ಯಡಿಯೂರಪ್ಪ ಗುರುವಾರ ಹೇಳಿದ್ದರು. 11 ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

Advertisement

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದೆ.

-ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ ಮಾಡಲಾಗಿದೆ.

– ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

– ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ. ಕೋವಿಡ್ ಮಾರ್ಗಸೂಚಿ ಪಾಲಿಸಿ ಕೆಲಸ ಮಾಡಬೇಕು.

Advertisement

-ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ.  ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ.

ಇದನ್ನೂ ಓದಿ:ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

-ಬಾರ್, ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ. ಮದ್ಯ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರಯಬಹುದು.

-ಕೆಎಸ್ ಆರ್ ಟಿ ಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿದೆ. ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

-ಈಗಾಗಲೇ  ನಿಗದಿಯಾದ ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ. ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾತ್ರಿ ಕರ್ಫ್ಯೂ: ರಾತ್ರಿ ಏಳರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಯಾರಿಗೂ ಸಂಚಾರಕ್ಕೆ ಅವಕಾಶವಿಲ್ಲ. ಈ ಅವಧಿಯಲ್ಲಿ ಕಾರ್ಖಾನೆಗಳು ಕೆಲಸ ನಿರ್ವಹಿಸಬಹುದು. ಕೆಲಸಗಾರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.

ವೀಕೆಂಡ್ ಕರ್ಫ್ಯೂ: ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರಸ್ಥರರು, ಮದ್ಯದಂಗಡಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next