Advertisement

ಸರ್ಕಾರ ಸೇಫ್..ಡಿಕೆಶಿ ಎಂಟ್ರಿ ಕೊಟ್ಟಿದ್ದಾರೆ, ಕಾದು ನೋಡೋಣ: ಸಿದ್ದರಾಮಯ್ಯ

12:01 PM Jul 07, 2019 | Nagendra Trasi |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೈತ್ರಿ ಸರ್ಕಾರದ 11 ಮಂದಿ ಶಾಸಕರು ಶನಿವಾರ ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಸರ್ಕಾರಕ್ಕೆ ಏನೂ ತೊಂದರೆ ಇಲ್ಲ. ಡಿಕೆಶಿ ಎಂಟ್ರಿ ಕೊಟ್ಟಿದ್ದಾರೆ. ಕಾದು ನೋಡೋಣ ಎಂದು ತಿಳಿಸಿದ್ದಾರೆ.

Advertisement

ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, 11 ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಸರ್ಕಾರ ಅಸ್ಥಿರ ಹೇಗಾಗುತ್ತೆ ಎಂದು ಪ್ರಶ್ನಿಸಿದರು.

ಅತೃಪ್ತ ನಾಲ್ವರು ಶಾಸಕರನ್ನು ಡಿಕೆ ಶಿವಕುಮಾರ್ ಅವರು ಸರ್ಕಾರಿ ನಿವಾಸಕ್ಕೆ ಕರೆದೊಯ್ದಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಉಳಿದ ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದರು.

ಇಂದು ಸಂಜೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸರ್ಕಾರಕ್ಕೆ ಏನೂ ಆಗಲ್ಲ ನಡೀರಿ ಎಂದು ವಿಶ್ವಾಸವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next