Advertisement

ಯಾವುದೇ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ: ಪ್ರಶ್ನೋತ್ತರ ಅವಧಿ ರದ್ದತಿ ಸಮರ್ಥಿಸಿದ ಕೇಂದ್ರ

03:24 PM Sep 14, 2020 | keerthan |

ಹೊಸದಿಲ್ಲಿ: ಅಧಿವೇಶನದಲ್ಲಿ ಯಾವುದೇ ಚಿಚಾರದ ಕುರಿತಾದ ಚರ್ಚೆಯಿಂದ ಹಿಂದೆ ಸರಿಯುವುದಿಲ್ಲ. ಎಲ್ಲಾ ವಿಚಾರದ ಬಗ್ಗೆಯೂ ಚರ್ಚೆ ನಡೆಸಲು ಸಿದ್ದರಿದ್ದೇವೆ ಎಂದಿರುವ ಕೇಂದ್ರ ಸರ್ಕಾರ ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

Advertisement

ಕಲಾಪದ ಪ್ರಶೋತ್ತರ ಅವಧಿ ಗೋಲ್ಡನ್ ಅವಧಿ ಇದ್ದಂತೆ. ಆದರೆ, ಸರ್ಕಾರದವರು ಪರಿಸ್ಥಿತಿಯ ಕಾರಣ ನೀಡಿ ಈ ಅವಧಿಯನ್ನು ಮೊಟಕುಗೊಳಿಸಿರುವುದಾಗಿ ಹೇಳುತ್ತಿದ್ದೀರಿ. ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ. ಪ್ರಶ್ನೋತ್ತರ ಹಾಗೂ ಶೂನ್ಯ ಅವಧಿಯನ್ನು ರದ್ದುಗೊಳಿಸುವ ಮೂಲಕ ನೀವು ಪ್ರಜಾಪ್ರಭುತ್ವದ ಕತ್ತುಹಿಸುಕುವ ಪ್ರಯತ್ನ ಮಾಡುತ್ತಿದ್ದೀರಿ ಎಂದು ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳರನ್ನು ಬೆನ್ನಟ್ಟಿ ಸೆರೆ ಹಿಡಿದ ಮಹಿಳಾ ಪತ್ರಕರ್ತೆ

ಕಾಂಗ್ರೆಸ್ ನಾಯಕರ ವಿರೋಧಕ್ಕೆ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ,  ಈ ಬಾರಿ ಅಸಾಧಾರಣ ಪರಿಸ್ಥಿತಿಯಾಗಿದ್ದು, ಇಲ್ಲಿ ಕಲಾಪ ನಡೆಸಬೇಕಿದೆ. ಸರ್ಕಾರವನ್ನು ನಡೆಸಲು ಹಲವು ದಾರಿಗಳಿವೆ. ಯಾವುದೇ ಚರ್ಚೆಗಳಿಂದ ಸರ್ಕಾರ ಓಡಿಹೋಗುತ್ತಿಲ್ಲ. ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲು ನಾವು ಸಿದ್ದರಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next