Advertisement
ಮಳೆ ಬಂದರೆ ನೀರು ಸೋರುವ ಮೂಲಕ ಮಕ್ಕಳ ಪಾಠಕ್ಕೆ ತೊಂದರೆಯಾಗುತ್ತಿದೆ. ಇದು, ಮಂಡ್ಯ ತಾಲೂಕಿನ ಕೆಂಚನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ. ಸುಮಾರು 60 ವರ್ಷಗಳ ಇತಿಹಾಸವಿರುವ ಶಾಲೆ ಈಗ ಶಿಥಿಲಾವಸ್ಥೆಯ ಲ್ಲಿದೆ. ಮಕ್ಕಳು ಜೀವ ಕೈಯಲ್ಲಿಡಿದು ಪಾಠ ಕೇಳುವ ಪರಿಸ್ಥಿತಿ ಉಂಟಾಗಿತ್ತು. ಇದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರುತ್ತಿದ್ದಾರೆ. ಆದರೆ, ಗ್ರಾಮಸ್ಥರು ಗ್ರಾಮದಲ್ಲಿಯೇ ಇರುವ ಸಮು ದಾಯ ಭವನದಲ್ಲಿ ಶಾಲೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.
Related Articles
Advertisement
48ರಿಂದ 18ಕ್ಕಿಳಿದ ಮಕ್ಕಳ ದಾಖಲಾತಿ ಸಂಖ್ಯೆ : ಶಾಲೆಯು 1ರಿಂದ 5ನೇ ತರಗತಿವರೆಗೆ ಇದೆ. ಸದ್ಯ ಎರಡು ಕೊಠಡಿಯಲ್ಲಿ ಶಾಲೆ ನಡೆಯುತ್ತಿತ್ತು. ಆದರೆ, ಶಾಲೆ ಶಿಥಿಲಗೊಂಡಿರುವುದರಿಂದ ಮಕ್ಕಳ ಪೋಷಕರು ಶಾಲೆಗೆ ಕಳುಹಿಸುತ್ತಿಲ್ಲ. ಇದರಿಂದ ಪ್ರಸ್ತುತ ಸಾಲಿನಲ್ಲಿ ದಾಖಲಾತಿ ಪ್ರಮಾಣ ಇಳಿಕೆಯಾಗಿದೆ. ಮೊದಲು 1ರಿಂದ 5ನೇ ತರಗತಿವರೆಗೆ ಸುಮಾರು 48 ಮಕ್ಕಳಿದ್ದರು. ಆದರೆ, ಈಗ ಅದರ ಸಂಖ್ಯೆ 18ಕ್ಕೆ ಇಳಿದಿದೆ. ಗ್ರಾಮದಲ್ಲಿ ಬಹುತೇಕ ಬಡವರು ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಆದರೆ ಕೊಠಡಿಗಳು ಸಂಪೂರ್ಣ ಹಾಳಾಗಿರುವುದರಿಂದ ಪೋಷಕರು ಹೆದರುತ್ತಿದ್ದಾರೆ. ಈಗಾಗಲೇ ಗ್ರಾಮದಲ್ಲಿ ಕೆಲವು ಮಕ್ಕಳ ಪೋಷಕರು ದುಡ್ಡಿಲ್ಲದಿದ್ದರೂ ಮಕ್ಕಳ ಶಿಕ್ಷಣದ ದೃಷ್ಟಿಯಿಂದ ಬೇರೆ ಕಡೆ ಖಾಸಗಿ ಶಾಲೆಗಳಿಗೆ ಕಳುಹಿಸುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲೆ ಸುಮಾರು 60 ವರ್ಷಗಳ ಹಳೆಯದು. ಹೊಸ ಕೊಠಡಿಗೆ ಸಾಕಷ್ಟು ಬಾರಿ ಅಧಿ ಕಾರಿಗಳಿಗೆ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ. ಮೇ ನಿಂದ ಶಾಲೆ ಆರಂಭವಾಗಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗ ದಿರಲೆಂದು ಗ್ರಾಮದ ಸಮುದಾಯ ಭವನದಲ್ಲಿ ತರಗತಿ ನಡೆಸಲಾಗುತ್ತಿದೆ. ಸರ್ಕಾರ, ಇಲಾಖೆ ಗಮನಹರಿಸಬೇಕಿದೆ. – ಪುಟ್ಟಸ್ವಾಮಿ, ಗ್ರಾಮದ ಮುಖಂಡ
– ಎಚ್.ಶಿವರಾಜು