ಸುಳ್ಯ: ಗ್ರಾಮ ಗ್ರಾಮಗಳಲ್ಲಿ ಇರುವ ಸರಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳಿದ್ದು, ಅತ್ಯುತ್ತಮ ಶೈಕ್ಷಣಿಕ ವಾತಾ ವರಣ ಇದೆ. ಆದುದರಿಂದ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸಿ ಬೆಳೆಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ. ಹೇಳಿದರು.
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆಯಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅತ್ಯು ತ್ತಮ ಶೈಕ್ಷಣಿಕ ಅರ್ಹತೆಯನ್ನು ಪಡೆದವರೇ ಶಿಕ್ಷಕರಾಗಿದ್ದಾರೆ. ಕನ್ನಡದ ಜತೆಗೆ ಇಂಗ್ಲಿಷ್, ಹಿಂದಿ ಭಾಷೆ ಸೇರಿ ಇತರ ಭಾಷೆಗಳನ್ನು ಕಲಿಸಲಾಗುತ್ತದೆ ಎಂದರು.
ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿ.ಪಂ.ಮಾಜಿ ಸದಸ್ಯ ಭರತ್ ಮುಂಡೋಡಿ, ಉದ್ಯಮಿ ಉಮೇಶ್ ಮುಂಡೋಡಿ, ನಿವೃತ್ತ ಬಿಡಿಒ ಮೀನಾಕ್ಷಿ ಗೌಡ ಎಂ., ಗ್ರಾ.ಪಂ. ಸದಸ್ಯೆ ಸುಲೋಚನಾ ದೇವ ಭಾಗವಹಿಸಿದ್ದರು.
ಶತಮಾನೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಲಿಂಗಪ್ಪ ಗೌಡ ಚಿತ್ತಡ್ಕ, ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ತರ್ ರುದ್ರ ಚಾಮುಂಡಿ ನಿಲಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ, ಶತಮಾನೋತ್ಸವ ಸಮಿತಿ ಸಂಚಾಲಕ ವಿಜೇಶ್ ಹಿರಿಯಡ್ಕ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಕೇಶ್ ರಾಜ್ ಹಿರಿಯಡ್ಕ, ಪ್ರಧಾನ ಕಾರ್ಯದರ್ಶಿ ಪ್ರೀತಂ ಮುಂಡೋಡಿ,
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ ಮತ್ತಿತರರು ಉಪಸ್ಥಿತರಿದ್ದರು.
ರಂಗಮಂದಿರ ಕೊಡುಗೆ ನೀಡಿದ ಉಮೇಶ್ ಮುಂಡೋಡಿ, ಹಾಗೂ ಶಾಲಾ ಕೊಠಡಿ ನಿರ್ಮಾಣ ಹಾಗೂ ಇತರ ನಿರ್ಮಾಣಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಸಮ್ಮಾನಿಸಲಾಯಿತು. ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯಗುರು ವಾಣಿ ಕೆ.ಎಸ್. ವಂದಿಸಿದರು. ಸೋಮಶೇಖರ ನೇರಳ ಕಾರ್ಯಕ್ರಮ ನಿರೂಪಿಸಿದರು.
ಅಭಿವೃದ್ಧಿ ಕಾರ್ಯ ಉದ್ಘಾಟನೆ ಸಭಾ ಕಾರ್ಯಕ್ರಮಕ್ಕೆ ಮೊದಲು ಆಕರ್ಷಕ ಮೆರವಣಿಗೆ ನಡೆಯಿತು. ಎಸ್.ಡಿ.ಎಂ.ಸಿ. ಅಧ್ಯಕ್ಷ
ಚಂದ್ರಶೇಖರ ಕಂದ್ರಪ್ಪಾಡಿ ಚಾಲನೆ ನೀಡಿದರು. ನಿವೃತ್ತ ಮುಖ್ಯಗುರು ಬಾಲಕೃಷ್ಣ ಮಾಸ್ತರ್ ಹಿರಿಯಡ್ಕ ಧ್ವಜಾರೋಹಣ ನೆರವೇರಿ ಸಿದರು. ನವೀಕೃತ ಶಾಲಾ ಕೊಠಡಿ, ನೂತನ ರಂಗಮಂದಿರ, ಕ್ರೀಡಾಂಗಣ, ಶಿಕ್ಷಕರ ವಸತಿಗೃಹ, ಇಂಟಾರ್ ಲಾಕ್ ಅಳವಡಿಕೆಯ ಉದ್ಘಾಟನೆಯನ್ನು ಅತಿಥಿಗಳು ನೆರವೇರಿಸಿದರು.