Advertisement

ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ

09:25 AM Sep 16, 2022 | Team Udayavani |

ರಾಮನಗರ: ಸರ್ಕಾರಿ ಸರ್ವರ್ ಹ್ಯಾಕ್ ಮಾಡುವ ಮೂಲಕ ಆರ್.ಟಿ.ಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಚಿಕ್ಕಮರೀಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್, ನಂದೀಶ್, ಶಿವರಾಜು ಅವರನ್ನು ಬಂಧಿಸಲಾಗಿದೆ. ಇವರೆಲ್ಲರೂ ರಿಯಲ್ ಎಸ್ಟೆಟ್ ಏಜೆಂಟ್, ಸೈಬರ್ ಮಾಲೀಕ, ಬ್ರೋಕರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಹಾರ್ಡ್ ವೇರ್ ಎಂಜಿನಿಯರ್ ಆಗಿದ್ದಾರೆ. ಓರ್ವ ಜಮೀನು ಖರೀದಿದಾರ ಸೇರಿದಂತೆ ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ರಾಮನಗರದ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ

ಸರ್ಕಾರಿ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಸರ್ಕಾರಿ ಸರ್ವರ್ ನಲ್ಲಿರುವ ತಂತ್ರಾಂಶಗಳ ಲೋಪಗಳೇ ಇವರಿಗೆ ವರದಾನವಾಗಿದೆ. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ದಾಖಲೆ ಸೃಷ್ಟಿಸಿರುವುದು ಈಗ ಬೆಳಕಿಗೆ ಬಂದಿದೆ. ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮಾಡಲಾಗದ ಕೆಲಸ ಇವರು ಮಾಡಿ ಫಲಾನುಭವಿಗಳಿಗೆ ಆರ್‌ಟಿಸಿ ಕೊಡುತ್ತಿದ್ದರು.

ಇದನ್ನೂ ಓದಿ:ಉಡುಪಿ: ಮಕ್ಕಳ ಕಳ್ಳತನ; ಸಂಶಯಾಸ್ಪದ ವ್ಯಕ್ತಿಗಳ ಮಾಹಿತಿ ನೀಡಲು ಎಸ್‌ಪಿ ಸೂಚನೆ

Advertisement

ಕನಕಪುರ ತಾಲೂಕಿನ ಬನ್ನಿಕುಪ್ಪೆ, ತುಗಣಿ, ರಾಂಪುರಗಳಲ್ಲಿ ಆರು ಎಕರೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಮೂಲಕ ಸರ್ಕಾರಕ್ಕೆ ಸುಮಾರು ಆರು ಕೋಟಿಯಷ್ಟು ಹಣ ವಂಚನೆ ಮಾಡಿದ್ದಾರೆ.

ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಭೂದಾಖಲೆಯನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ಈಗಾಗಲೇ ಇವರು ಏಳು ಆರ್.ಟಿ.ಸಿ  ಸೃಷ್ಟಿಸಿ ಆರು ಮಂದಿಗೆ ಭೂಮಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next