ದಾವಣಗೆರೆ: ಜಾತಿ ಗಣತಿ ಸರಿಯಾಗಿ ಆಗಿಲ್ಲ ಎಂಬುದು ಎಲ್ಲರ ಮನಸ್ಸಿನಲ್ಲಿದೆ. ನಮ್ಮದು ಕೂಡ ಅದೇ ಭಾವನೆ. ಹಾಗಾಗಿ ಸರ್ಕಾರ ಹೊಸದಾಗಿ ಜಾತಿಗಣತಿ ನಡೆಸಿ ವಾಸ್ತವಿಕ ಅಂಶಗಳನ್ನು ತಿಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಜತೆ ಚರ್ಚಿಸಿದ ನಂತರವೇ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಹೊಸಬರಿಗೆ ಹೆಚ್ಚಿನ ಜವಾಬ್ದಾರಿ ಕೊಡಲಾಗಿದೆ. ಯಾರೋ ಏನೋ ಹೇಳಿದರು ಅನ್ನುವುದಕ್ಕೆ ಮಾತನಾಡಲು ಹೋಗುವುದಿಲ್ಲ. ಯತ್ನಾಳ್, ವಿಜಯೇಂದ್ರ ಬಗ್ಗೆ ಮಾತನಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ.
ಹೈಕಮಾಂಡ್‌ಗೆ ದೂರು ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಮುಂದೆ ಎಲ್ಲವೂ ಸರಿ ಹೋಗಲಿದೆ ಎಂದರು.