ಹುಬ್ಬಳ್ಳಿ: ಕೇಂದ್ರದ ಅಗ್ನಿಪಥ ಯೋಜನೆಗೆ ನಮ್ಮ ವಿರೋಧವಿದೆ. ನಾಲ್ಕು ವರ್ಷದ ಬಳಿಕ ಆಯ್ಕೆಯಾದ ಅಭ್ಯರ್ಥಿಗಳ ಪರಿಸ್ಥಿತಿ ಏನು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು. ಅದನ್ನು ಬಿಟ್ಟು ಹಿಂಸಾತ್ಮಕ ಕೃತ್ಯಕ್ಕೆ ಮುಂದಾಗಬಾರದು. ಪ್ರತಿಭಟನಾಕಾರರ ಜತ ಸರಕಾರ ಮಾತನಾಡಬೇಕು. ಅಗ್ನಿಪಥ ಯೋಜನೆಯ ನೇಮಕಾತಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.
ಛಲವಾದಿ ನಾರಾಯಣಸ್ವಾಮಿ ನನ್ನ ವಿರುದ್ದ ದಾಖಲಿಸಿರುವ ಜಾತಿ ನಿಂದನೆ ಪ್ರಕರಣ ಹಿಂದೆ ಬಿಜೆಪಿಯ ಹುನ್ನಾರವಿದೆ. ಅವರು ನಾರಾಯಣಸ್ವಾಮಿ ಮೂಲಕ ಅದನ್ನು ಮಾಡಿಸಿದ್ದಾರೆ. ನಾನು ಜಾತಿ ನಿಂದನೆ ಮಾಡಿಯೇ ಇಲ್ಲ. ಆದರೆ ಬಿಜೆಪಿಯವರು ಹಳೇ ಚಡ್ಡಿ ಅವರ ಮೇಲೆ ಹೊರಿಸಿದ್ದಾರೆ. ಹಾಗಾದರೆ ಇದು ಏನು? ನಾನು ಲಾಯರ್ ಇದೀನಿ ನನಗೆ ಎಲ್ಲಾ ಗೊತ್ತು ಎಂದರು.
ಇದನ್ನೂ ಓದಿ:ಪಿಯುಸಿ ಫಲಿತಾಂಶ: ದ.ಕನ್ನಡ ಪ್ರಥಮ, ಉಡುಪಿ ದ್ವಿತೀಯ; ಇಲ್ಲಿದೆ ಜಿಲ್ಲಾವಾರು ಫಲಿತಾಂಶ
ಯುಪಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಯು ಕಣ್ಣೊರೆಸುವ ತಂತ್ರ ಅಷ್ಟೇ ಎಂದು ವ್ಯಂಗ್ಯವಾಡಿದರು.