Advertisement
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇದು ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳ್ಳ ಸರ್ಕಾರ: ಶರವಣ
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಏಕಾಏಕಿ ಪೆಟ್ರೋಲ್-ಡೀಸೆಲ್, ತರಕಾರಿ ಬೆಲೆ ಏರಿಸಿ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಇದೀಗ ಹಾಲಿನ ದರ ಕೂಡ ಹೆಚ್ಚಿಸಿದೆ. ಕೊಟ್ಟು ಕಿತ್ತುಕೊಳ್ಳುವ ಈ ಸರ್ಕಾರ ಕೂಡಲೇ ತೊಲಗಬೇಕು ಎಂದು ಜೆಡಿಎಸ್ ಮುಖಂಡ ಶರವಣ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯದ ಆರ್ಥಿಕ ಸ್ಥಿತಿ ಕುಸಿದು ಬಿದ್ದಿದ್ದು, ಚಿಲ್ಲರೆ ಹಣವನ್ನು ಬಡವರ ಜೇಬಿನಿಂದ ಕದಿಯಲು ಹೊರಟ ಸಿದ್ದರಾಮಯ್ಯ ಸರ್ಕಾರ ಕಳ್ಳ ಸರ್ಕಾರ ಎನ್ನುವುದನ್ನು ವಿಧಿಯಿಲ್ಲದೆ ಹೇಳಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ