Advertisement

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

12:04 PM Jun 29, 2024 | keerthan |

ಶಿವಮೊಗ್ಗ: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರ ಜೇಬಿಗೆ ಕೈ ಹಾಕಿ ಹಣ ಕಿತ್ತುಕೊಳ್ಳುವ ಕೆಲಸವಾಗಿದೆ. ಈಗಾಗಲೇ ಸಿಎಂ ಡಿಸಿಎಂ ಕುರ್ಚಿ ಬಗ್ಗೆ ಚರ್ಚೆ ಶುರುವಾಗಿದೆ. ರಾಜ್ಯದಲ್ಲಿ ಅಧಿಕಾರದ ತಿಕ್ಕಾಟ ಶುರುವಾಗಿದೆ. ಜನ ಎಲ್ಲವನ್ನು ನೋಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಡಗಿಯಲ್ಲಿ ನಡೆದ ಭೀಕರ ಅಪಘಾತ ದುಃಖ ತಂದಿದೆ. ಎಮ್ಮೆಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಸದಸ್ಯರು ಸಾವನಪ್ಪಿದ್ದಾರೆ. ಸರ್ಕಾರ ಈಗಾಗಲೇ ಎರಡು ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇನ್ನು ಹೆಚ್ಚಿನ‌ ಪರಿಹಾರ ನೀಡಬೇಕು. ಕನಿಷ್ಠ ಒಬ್ಬರಿಗೆ 5 ಲಕ್ಷ ಪರಿಹಾರ ನೀಡಬೇಕು. ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಲು ಪಕ್ಷದಿಂದಲೂ ಪ್ರಯತ್ನ ಮಾಡುತ್ತೇವೆ. ಎಲ್ಲಾ ಜನಪ್ರತಿನಿಧಿಗಳು ಸೇರಿ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬುತ್ತೇವೆ.ಇನ್ನು ಒಂದು ಗಂಟೆಯಲ್ಲಿ ಎಲ್ಲರೂ ಮನೆ ಸೇರುತ್ತಿದ್ದರು. ಅಷ್ಟರಲ್ಲಿ ಹೀಗೆ ಆಗಿದೆ, ದೇವರ ಇಚ್ಚೆ ಇತ್ತು ಏನು ಗೊತ್ತಿಲ್ಲ. ವಾಹನ ಸವಾರರು ಇನ್ನಾದರೂ ಎಚ್ಚರಿಕೆಯಿಂದ ಇರಬೇಕು ಎಂದರು.

ಶಿವಮೊಗ್ಗದ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರವಾಗಿ ಮಾತನಾಡಿದ ರಾಘವೇಂದ್ರ, ಸಹಕಾರಿ ಪ್ರಕೋಷ್ಟದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅವರು ಸಾಕಷ್ಟು ವರ್ಷದಿಂದ ಅಧಿಕಾರಿದಲ್ಲಿದ್ದಾರೆ. ಅವರ ಪಕ್ಷವೇ ರಾಜ್ಯದಲ್ಲಿ ಅಧಿಕಾರಿದಲ್ಲಿದೆ. ಹಾಗಾಗಿ ಅವರು ಸಹಕಾರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. 51 ಅವರು ಗೆದ್ದಿದ್ದಾರೆ, ನಾವು 49 ಗೆದ್ದಿದ್ದೇವೆ. ಎಲ್ಲಾ ರೀತಿಯ ಪ್ರಯತ್ನ ಹಾಗೂ ಶಕ್ಷಿ ಮೀರಿ ನಮ್ಮ ಪಕ್ಷದ ಅಭ್ಯರ್ಥಿ ಗಳು ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹತ್ತಿರದಿಂದ ಸೋತಿದೆ ಅಷ್ಟೇ. ಬಿಜೆಪಿ ಅಭ್ಯರ್ಥಿ ಗಳು ತುಂಬಾ ಪೈಟ್ ನೀಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next