ಶ್ರೀನಗರ: ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಒಂದು ಸ್ಫೋಟ ಸೇರಿದಂತೆ ಹಲವು ಸ್ಫೋಟಗಳನ್ನು ನಡೆಸಿದ ಆರೋಪದ ಮೇಲೆ ಲಷ್ಕರ್-ಎ-ತೊಯ್ಬಾ-ಭಯೋತ್ಪಾದಕನಾಗಿ ಬದಲಾಗಿರುವ ಸರಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಗುರುವಾರ ತಿಳಿಸಿದ್ದಾರೆ.
ಜಮ್ಮುವಿನ ನರ್ವಾಲ್‌ನಲ್ಲಿ ಇತ್ತೀಚೆಗೆ ನಡೆದ ಅವಳಿ ಸ್ಫೋಟ ಪ್ರಕರಣದ ತನಿಖೆಯ ನಂತರ ರಿಯಾಸಿ ಜಿಲ್ಲೆಯ ನಿವಾಸಿ ಆರಿಫ್‌ನನ್ನು ಬಂಧಿಸಲಾಗಿದೆ. ಸುಗಂಧ ದ್ರವ್ಯದ ಬಾಟಲಿಯೊಳಗೆ ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಆತನ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಸಿಂಗ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥರು ಕೇಂದ್ರಾಡಳಿತ ಪ್ರದೇಶದಲ್ಲಿ ಇಂತಹ ಬಾಂಬ್ ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. ಆರಿಫ್ ತನ್ನ ಪಾಕಿಸ್ಥಾನಿ ಹ್ಯಾಂಡ್ಲರ್‌ಗಳ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದ್ದ, ಕಳೆದ ಮೇನಲ್ಲಿ ವೈಷ್ಣೋದೇವಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ನಲ್ಲಿ ಬಾಂಬ್ ಸ್ಫೋಟದಲ್ಲಿ ನಾಲ್ಕು ಜನರು ಬಲಿಯಾಗಿ 24 ಜನ ಗಾಯಗೊಂಡಿದ್ದರು. ಇದರಲ್ಲಿ ತಾನು ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಸಿಂಗ್ ಹೇಳಿದ್ದಾರೆ.
ಫೆಬ್ರವರಿ 2022 ರಲ್ಲಿ ಜಮ್ಮುವಿನ ಶಾಸ್ತ್ರಿ ನಗರ ಪ್ರದೇಶದಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ತನ್ನ ಪಾತ್ರವನ್ನು ಒಪ್ಪಿಕೊಂಡಿದ್ದು, ಜೊತೆಗೆ ಜನವರಿ 21 ರಂದು ನರ್ವಾಲ್‌ನಲ್ಲಿ ಅವಳಿ ಸ್ಫೋಟಗಳು ಒಂಬತ್ತು ಜನ ಗಾಯಗೊಂಡಿದ್ದರು.