Advertisement
ಒಂದು ತಿಂಗಳ ಅವಧಿಯಲ್ಲಿ ಉಗ್ರರು ಕಾಶ್ಮೀರಿ ಪಂಡಿತ ಸಮುದಾಯದವರನ್ನು ಗುರಿಯಾಗಿಸಿ ಹತ್ಯೆ ಮಾಡುತ್ತಿರುವುದರಿಂದ ತುರ್ತಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸುರಕ್ಷಿತ ಪ್ರದೇಶಗಳಿಗೆ ಹೋಗುವುದೇ ಉತ್ತಮ ಎಂದು ಜತೆಗೆ ಭಯಗ್ರಸ್ತ ಪಂಡಿತ ಸಮುದಾಯದವರು ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಶೀಘ್ರವೇ ಈ ಕ್ರಮ ಜಾರಿಯಾಗಲಿದೆ.
Related Articles
ಗಡಿ ಭಾಗದಲ್ಲಿ ಇರುವ ಯೋಧರನ್ನು ಪ್ರಚೋದಿಸುವುದಕ್ಕಾಗಿಯೇ ಹಿಂದೂಗಳನ್ನು ಗುರುತಿಸಿ ದಾಳಿ ನಡೆಸಲಾಗುತ್ತಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಜಮ್ಮು – ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ರವಿವಾರ ಹೇಳಿದ್ದಾರೆ. ಇದು ಉಗ್ರಗಾಮಿಗಳ ಹತಾಶೆಯ ಕೃತ್ಯ ಎಂದು ಅವರು ಬಣ್ಣಿಸಿದ್ದಾರೆ. ಬೆಂಕಿ ಆರುವ ಮೊದಲು ಪ್ರಜ್ವಲಿಸಿ ಉರಿಯುತ್ತದೆ. ಅದೇ ರೀತಿ ಉಗ್ರರೂ ತಮ್ಮ ಕೊನೆಗಾಲದಲ್ಲಿ ವಿಜೃಂಭಿಸುತ್ತಿದ್ದಾರೆ. ಇಂಥ ಕೃತ್ಯ ಎಸಗಿದವರು ಯಾರೇ ಆಗಲಿ, ಅವರ ವಿರುದ್ಧ ಕ್ರಮ ಕೈಗೊಂಡೇ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
Advertisement
ಕಣಿವೆ ತೊರೆಯುವುದು ಬೇಡಉಗ್ರರ ಕೃತ್ಯಗಳಿಂದ ಕಾಶ್ಮೀರ ಪಂಡಿತ ಸಮುದಾಯದವರು ಆತಂಕಗೊಳ್ಳುವುದು ಬೇಡ. ಕೇಂದ್ರ ಸರಕಾರ ಎಲ್ಲ ರೀತಿಯ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಮ್ಮು -ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮನವಿ ಮಾಡಿದ್ದಾರೆ. ಇದು ಪಾಕಿಸ್ಥಾನದ ಕುತಂತ್ರ ಎಂದು ಟೀಕಿಸಿದ ಅವರು, ಇದನ್ನು ಬಗ್ಗು ಬಡಿಯಲಿದ್ದೇವೆ ಎಂದರು. ಜಮ್ಮು – ಕಾಶ್ಮೀರ ಎನ್ನುವುದು ದೇಶದ ಮಕುಟ. 32 ವರ್ಷಗಳಿಂದ ನಮ್ಮ ನೆರೆಯ ದೇಶ ನಡೆಸುವ ಛಾಯಾ ಸಮರವನ್ನು ಎದುರಿಸುತ್ತಿದ್ದೇವೆ ಎಂದು ಅವರು ಪ್ರತಿಪಾದಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶದ ಪೊಲೀಸರು ಮತ್ತು ಸೇನೆಯ ಅಧಿಕಾರಿಗಳಿಗೆ ಪ್ರಧಾನಿ ಮೋದಿ ನೇತೃತ್ವದ ಸರಕಾರ ಉಗ್ರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಎರಡು ವರ್ಷಗಳ ಅವಧಿಯಲ್ಲಿ ಕೇಂದ್ರಾಡಳಿತ ಪ್ರದೇಶದ ಭದ್ರತಾ ವ್ಯವಸ್ಥೆ ಗಣನೀಯವಾಗಿ ಸುಧಾರಿಸಿದೆ ಎಂದಿದ್ದಾರೆ. ಇನ್ನೊಂದೆಡೆ ಜಮ್ಮು -ಕಾಶ್ಮೀರದ ಪರಿಸ್ಥಿತಿಯನ್ನು ಬಿಜೆಪಿಗೆ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಇನ್ನೊಂದೆಡೆ ಕಾಶ್ಮೀರ ಪಂಡಿತ ಸಮುದಾಯಕ್ಕೆ ಬೆಂಬಲ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಸಚಿವ ಆದಿತ್ಯ ಠಾಕ್ರೆ ವಿಭಿನ್ನ ಹೇಳಿಕೆ ನೀಡಿದ್ದಾರೆ. ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದರೆ, ಕಾಶ್ಮೀರ ಪಂಡಿತರಿಗೆ ಶಿವಸೇನೆಯ ಬೆಂಬಲ ಇದೆ ಎಂದು ಉದ್ಧವ್ ಪುತ್ರ ಆದಿತ್ಯ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ ಬನ್ನಿ…, ಭದ್ರತೆ ಕೊಡ್ತೇವೆ
“ಕಾಶ್ಮೀರ ಪಂಡಿತ ಸಮುದಾಯದವರೇ ಮಹಾರಾಷ್ಟ್ರಕ್ಕೆ ಬನ್ನಿ. ನಾವು, ನಿಮಗೆ ಸೂಕ್ತ ಭದ್ರತೆಯನ್ನು ನೀಡುತ್ತೇವೆ’ ಹೀಗೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಅವರು, “ಕಾಶ್ಮೀರ ಪಂಡಿತ ಸಮುದಾಯದವರಿಗೆ ಉಂಟಾಗುತ್ತಿರುವ ಕಷ್ಟಕರವಾಗಿರುವ ಪರಿಸ್ಥಿತಿ ತಪ್ಪಿಸಬೇಕಾಗಿದೆ. ಹೀಗಾಗಿ, ಸಮುದಾಯದವರು ಮಹಾರಾಷ್ಟ್ರಕ್ಕೆ ಬರಲಿ. ಅವರಿಗೆ ಸೂಕ್ತ ಭದ್ರತೆಯನ್ನು ನೀಡಲಾಗುತ್ತದೆ’ ಎಂದು ಹೇಳಿದ್ದಾರೆ. ಮಹಾರಾಷ್ಟ್ರವೇ ಸಮುದಾಯದ ಬೆಂಬಲಕ್ಕೆ ನಿಲ್ಲಲಿದೆ ಎಂದು ಹೇಳಿದ್ದಾರೆ.