Advertisement

ಬೇಡಿಕೆ ಈಡೇರಿಸಿ-ಕಾರ್ಮಿಕರ ಮುಷ್ಕರ: ನಾಳೆ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಬಂದ್?

08:47 AM Feb 20, 2020 | Nagendra Trasi |

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನಿಗಮದ ಕಾರ್ಮಿಕ ಒಕ್ಕೂಟ ಗುರುವಾರ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಂಚಾರ ಬಹುತೇಕ ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

ಸಾರಿಗೆ ನಿಗಮಗಳ ಕಾರ್ಮಿಕರು ಹಾಗೂ ಇತರ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಾಳೆ ಧಾರವಾಡದಿಂದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ಹೊರಡಲಿದೆ.

ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಪ್ರತಿಭಟನೆಯಲ್ಲಿ ಪತ್ನಿ, ಮಕ್ಕಳೊಂದಿಗೆ ಸಾರಿಗೆ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ನಾಳೆ ಸಾರಿಗೆ ನೌಕರರ ನಾಲ್ಕು ನಿಗಮಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರಿಂದ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ರಸ್ತೆಗಿಳಿಯುವುದು ಅನುಮಾನ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next