ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ ಬೆನ್ನಲ್ಲೇ ಸರ್ಕಾರ ವಿಜಯಪುರ ಶಾಸಕ ಯತ್ನಾಳಗೆ ನೀಡಿದ್ದ ಪೊಲೀಸ್ ಭದ್ರತೆಯನ್ನು ಹಿಂಪಡೆದಿದೆ. ಇದನ್ನು ವಿರೋಧಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಯತ್ನಾಳ ಸೇಡಿನ ರಾಜಕೀಯಕ್ಕೆ ಧಿಕ್ಕಾರ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಹಿಂದೂಪರ, ಪ್ರಗತಿಪರ ಸಂಘಟನೆ, ಹೋರಾಟದಲ್ಲಿ ತೊಡಗಿರುವ ತಮಗೆ ಭದ್ರತೆಯ ಅಗತ್ಯವಿದೆ ಎಂದು ಸರ್ಕಾರ ಗುಪ್ತಚರ ಇಲಾಖೆ ವರದಿ ಆಧರಿಸಿ ವೈಯಕ್ತಿಕ ಭದ್ರತೆ ನೀಡಿದೆ. ಆದರೆ ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡಿದೆ ಎಂಬ ಕಾರಣಕ್ಕೆ ನನಗೆ ನೀಡಿದ್ಧ ಭದ್ರತೆ ಹಿಂಪಡೆಯುವ ಮೂಲಕ ಧ್ವೇಷದ ರಾಜಕೀಯ ಮಾಡುವ ನಿಮ್ಮ ದಾಳಿಯನ್ನು ಮುಂದುವರೆಸಿದ್ದೀರಿ ಎಂದು ಕರೆಯಲಾಗುತ್ತದೆ. ನಿಮ್ಮ ದ್ವೇಷದ ರಾಜಕೀಯಕ್ಕೆ ನನ್ನ ಧಿಕ್ಕಾರ ಎಂದು ಯತ್ನಾಳ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಉ.ಕರ್ನಾಟಕದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿಗಳ ಅಭಿವೃದ್ಧಿ: ಗಡ್ಕರಿ
ಮುಖ್ಯಮಂತ್ರಿ, ಗೃಹಮಂತ್ರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗೂ ಪತ್ರ ಬರೆದು, ತಮಗೆ ನೀಡಿದ್ದ ವೈಯಕ್ತಿಕ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರದ ಕ್ರಮಕ್ಕೆ ಧಿಕ್ಕಾರ ಇರಲಿ. ಆದರೆ ತಮ್ಮ ಜೀವಕ್ಕೆ ಅಪಾಯ ಸಂಭವಿಸಿದಲ್ಲಿ ಸರ್ಕಾರವೇ ಹೊಣೆ ಎಂದು ಪತ್ರದಲ್ಲಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಪಾಕ್ ಪರ ಘೋಷಣೆ ವಿಚಾರ: ಮಂಗಳೂರಿನಲ್ಲಿ ಎಸ್‌ಡಿಪಿಐನಿಂದ ‘SP ಕಚೇರಿ ಚಲೋ’ ಪ್ರತಿಭಟನೆ