Advertisement

Govt., ಕಲ್ಯಾಣ ಅಭಿವೃದ್ಧಿಗೆ ಸರಕಾರದಿಂದ ಪಣ: ದಶಕದ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ

12:37 AM Sep 17, 2024 | Team Udayavani |

ಬೆಂಗಳೂರು: ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ದಶಕದ ಬಳಿಕ ರಾಜ್ಯ ಸರಕಾರದ ಮಹತ್ವದ ಸಚಿವ ಸಂಪುಟ ಸಭೆ ಮಂಗಳವಾರ ನಡೆಯಲಿದ್ದು, ಈ ಭಾಗದ ಅಭಿವೃದ್ಧಿಗಾಗಿ 3,075 ಕೋಟಿ ರೂ.ಗಳ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಗಳಿವೆ. ಇದರ ಜತೆಗೆ ಬಹುವರ್ಷದ ಬೇಡಿಕೆಯಾಗಿದ್ದ ಬೀದರ್‌ ಹಾಗೂ ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾ ವನೆಯೂ ಸಂಪುಟದ ಮುಂದಿದೆ.

Advertisement

ಬೀದರ್‌ ಹಾಗೂ ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸು ವಂತೆ ಬಹಳ ವರ್ಷಗಳ ಬೇಡಿಕೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವಕ್ಕೆ ಅಂಗೀಕಾರ ಲಭಿಸುವ ಸಾಧ್ಯತೆ ಇದೆ. ಇದರ ಹೊರತಾಗಿ ರಾಜ ಕೀಯ ಮಹತ್ವಾಕಾಂಕ್ಷೆಯ ಕೆಲವು ಭರವಸೆಗಳು ಈ ಸಭೆಯಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ.

ಸಿದ್ದರಾಮಯ್ಯ ಸಹಿತ ಹಿರಿಯ ಸಚಿವರು ಸೋಮವಾರವೇ ಕಲಬುರಗಿ ತಲುಪಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್‌ ಮಂಗಳವಾರ ಕಲಬುರಗಿಗೆ ತೆರಳಲಿದ್ದಾರೆ. ಆಡಳಿತ ವಿಕೇಂದ್ರೀಕರಣ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಕೇಂದ್ರ ವಾದ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸುತ್ತಿರುವುದಾಗಿ ಸರಕಾರ ಈಗಾಗಲೇ ಘೋಷಣೆ ಮಾಡಿದೆ.

ಏನೇನು ನಿರ್ಣಯ ಸಾಧ್ಯತೆ?
-ಕಲ್ಯಾಣ ಕರ್ನಾಟಕದಲ್ಲಿ ಹೊಸದಾಗಿ ರಚನೆಯಾದ 16 ತಾಲೂಕುಗಳಲ್ಲಿ ಏಕರೂಪ ಆಡಳಿತಸೌಧ ನಿರ್ಮಾಣಕ್ಕೆ
135 ಕೋಟಿ ರೂ.
-ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕೆರೆ ತುಂಬಿಸುವ 135 ಕೋ. ರೂ. ಯೋಜನೆಗೆ ಆಡಳಿತಾತ್ಮಕ ಅನುಮೋದನೆ
-ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಹತ್ತಿರ ಭೀಮಾ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ನಿರ್ಮಾಣಕ್ಕೆ 130 ಕೋ. ರೂ.
-ಮಾನ್ವಿ ತಾಲೂಕಿನ ಕುರ್ಡಿಕೆರೆ ತುಂಬಿಸಲು 132 ಕೋಟಿ ರೂ., ಕಲಬುರಗಿ, ಕೊಪ್ಪಳ, ಗದಗ ಜಿಟಿಟಿಸಿಗೆ ತಲಾ 53.25 ಕೋಟಿ ರೂ.
-ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ವಿಶ್ವವಿದ್ಯಾನಿಲಯ ಮಸೂದೆಗೆ ಒಪ್ಪಿಗೆ ಸಾಧ್ಯತೆ
-ಗದಗ, ಕೊಪ್ಪಳ, ಚಾಮರಾಜ ನಗರದಲ್ಲಿ 450 ಹಾಸಿಗೆ ಆಸ್ಪತ್ರೆ ಗಳಿಗೆ ವೈದ್ಯಕೀಯ ಸಾಮಗ್ರಿ ಖರೀದಿಗೆ 149 ಕೋಟಿ ರೂ.
-ವೈದ್ಯ ಶಿಕ್ಷಣ ಇಲಾಖೆ ವ್ಯಾಪ್ತಿಯ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಯಂತ್ರ ಖರೀದಿಗೆ 85 ಕೋಟಿ ರೂ.
-43 ಅಂಬೇಡ್ಕರ್‌ ಕಾರ್ಮಿಕ ಸೇವಾ ಕೇಂದ್ರಗಳನ್ನು ಪ್ರಾರಂಭಿ ಸುವುದಕ್ಕೆ 48 ಕೋ.ರೂ. ಬಿಡುಗಡೆ ಸಾಧ್ಯತೆ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಹಾಗೂ ಪ್ರತ್ಯೇಕ ಕೈಗಾರಿಕಾ ನೀತಿ ಜಾರಿ ಬಗ್ಗೆ ಕಲಬುರಗಿಯಲ್ಲಿ ಮಂಗಳವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪೂರಕವಾದ ಪ್ರಮುಖ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು.
-ಸಿದ್ದರಾಮಯ್ಯ, ಮುಖ್ಯಮಂತ್ರಿ

Advertisement

 

Advertisement

Udayavani is now on Telegram. Click here to join our channel and stay updated with the latest news.