Advertisement
ತಾಲೂಕಿನ ಛಬ್ಬಿ ಗ್ರಾಮದಲ್ಲಿ ರವಿವಾರ ನೂತನ ಪ್ರೌಢಶಾಲೆ ಕಟ್ಟಡದ ಭೂಮಿಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಈಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ಏನೇಯಾದರೂ ಬಡ ಜನರಿಗೆ ಒಳ್ಳೆಯದಾದರೆ ಸಾಕು. ಅಕ್ಕಿ ಎಲ್ಲಿಂದ ಹಾಗೂ ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕುಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಜು.1ರಿಂದ ಅಕ್ಕಿ ಕೊಡದೆ ಹೋದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.
ಶಿಗ್ಗಾವಿ: ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅನುದಾನ ಕಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ಮಡ್ಲಿ ಗ್ರಾಮದಲ್ಲಿ ಭಾನುವಾರ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಸಿಎಂ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ. ಒಂದು ಗ್ರಾಮಕ್ಕೆ ಕುಡಿಯುವ ನೀರು, ಆರೋಗ್ಯದ ಜತೆಗೆ ಶಾಲಾ ಕೊಠಡಿಗಳು ಸಹ ಮುಖ್ಯ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆಯಡಿ ಸುಮಾರು 9235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ ಎಂದರು.
Related Articles
ರಾಜ್ಯ ಸರ್ಕಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ಬಿಲ್ ಕಟ್ಟಲಿಲ್ಲ ಎಂದರೆ ಕರೆಂಟ್ ಸಪ್ಲೆ„ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ. ರೈತರಿಗೆ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಜನಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ವಿದ್ಯುತ್ ಬೇಕು. ಬೋರ್‌ವೆಲ್‌ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೇಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕಷ್ಟವಾಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಇವರು ಸರಿಯಾದ ಕ್ರಮ ತೆಗೆದಕೊಳ್ಳದಿದ್ದರೆ ವಿದ್ಯುತ್ಛಕ್ತಿಯ ûಾಮ ಎದುರಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
Advertisement