Advertisement

Govtಎಚ್ಚರಿಕೆಗೆ ಬಗ್ಗದ ಅತಿಥಿ ಉಪನ್ಯಾಸಕರು; ತುಮಕೂರಿನಿಂದ ಪಾದಯಾತ್ರೆ,ಸಾವಿರಾರು ಮಂದಿ ಭಾಗಿ

01:10 AM Jan 02, 2024 | Team Udayavani |

ಬೆಂಗಳೂರು/ತುಮಕೂರು: ಹೋರಾಟ ಮುಂದುವರಿಸಿದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಸರಕಾರ
ನೀಡಿದ್ದ ಎಚ್ಚರಿಕೆಗೆ ಬಗ್ಗದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತುಮಕೂರಿ
ನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದ್ದಾರೆ.

Advertisement

ತುಮಕೂರಿನ ಸಿದ್ಧಗಂಗಾ ಮಠ ದಿಂದ ಆರಂಭಿಸಿರುವ ಬೆಂಗಳೂರು ಚಲೋ ಪಾದಯಾತ್ರೆಯಲ್ಲಿ ಸಾವಿ ರಾರು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಭಾಗಿಯಾಗಿದ್ದಾರೆ.

ಸರಕಾರವೂ ಅತಿಥಿ ಉಪನ್ಯಾಸಕರ ವಿರುದ್ಧ ಮುಂದಿನ ಕ್ರಮ ಕೈಗೊ ಳ್ಳಲು ಮೀನಮೇಷ ಎಣಿಸುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಇಕ್ಕಟ್ಟಿನಲ್ಲಿ ಸಿಲುಕಿದೆ.

ಸೋಮವಾರ ಅಪರಾಹ್ನ 2 ಗಂಟೆಯೊಳಗೆ ತರಗತಿಗೆ ಹಾಜರಾದ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಸಲ್ಲಿಸುವಂತೆ ಸರಕಾರಿ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ಸೂಚನೆ ನೀಡಲಾಗಿತ್ತು. ಆದರೆ ಸರಕಾರದ ಎಚ್ಚರಿಕೆಗೆ ಸೊಪ್ಪು ಹಾಕದೆ ಶೇ. 80ರಷ್ಟು ಅತಿಥಿ ಉಪನ್ಯಾಸಕರು ತರಗತಿಗೆ ಗೈರಾಗಿದ್ದಾರೆ.

ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಉತ್ತಮ ಪ್ರತಿಕ್ರಿಯೆ ಲಭಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಸಚಿವ ಡಾಣ ಎಂ.ಸಿ. ಸುಧಾಕರ್‌ ತೀರ್ಮಾನಿಸಿದ್ದಾರೆ.
ನ. 23ರಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿದ್ದು, ಕಳೆದ 40 ದಿನಗಳಿಂದ ಪಠ್ಯ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ. ಬಹುತೇಕ ಸರಕಾರಿ ಪದವಿ ಕಾಲೇಜುಗಳಲ್ಲಿ ಶೇ. 50ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರೇ ಬೋಧನ ಚಟುವಟಿಕೆ ನಡೆಸುತ್ತಿದ್ದಾರೆ.

Advertisement

ಡಾಬಸ್‌ ಪೇಟೆಯಲ್ಲಿ ವಾಸ್ತವ್ಯ
ಸಿದ್ದಗಂಗಾ ಮಠದಿಂದ ಆರಂಭವಾಗಿರುವ ಪಾದಯಾತ್ರೆ ರಾತ್ರಿ ಡಾಬಸ್‌ ಪೇಟೆಯಲ್ಲಿ ವಾಸ್ತವ್ಯ ಹೂಡಿದೆ. ಮಂಗಳವಾರ ನೆಲಮಂಗಲದ ಶ್ರೀಸಿದ್ಧಗಂಗಾ ಪದವಿ ಕಾಲೇಜಿನಲ್ಲಿ ವಾಸ್ತವ್ಯ ಹೂಡಲಿದ್ದು, ಬುಧವಾರ ಬೆಂಗಳೂರು ನಗರವನ್ನು ಪ್ರವೇಶಿಸಲಿದೆ.

ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮಂಗಳವಾರದಿಂದ ಇನ್ನಷ್ಟು ಅತಿಥಿ ಉಪನ್ಯಾಸಕರು ಭಾಗಿಯಾಗಲಿದ್ದಾರೆ. ನಮ್ಮ ಹೋರಾಟಕ್ಕೆ ಸರಕಾರ ಮಣಿಯ ದಿದ್ದರೆ ಆ ಬಳಿಕ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ.
– ಡಾ| ಹನುಮಂತ ಗೌಡ ಕಲ್ಮನಿ, ರಾಜ್ಯ ಸರಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ

ಸೋಮವಾರ 3 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ತರಗತಿಗೆ ಹಾಜರಾಗಿದ್ದಾರೆ. ಮಂಗಳವಾರ ನಿಖರವಾದ ಮಾಹಿತಿ ಪಡೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
-ಡಾ| ಎಂ.ಸಿ. ಸುಧಾಕರ್‌,
ಉನ್ನತ ಶಿಕ್ಷಣ ಸಚಿವ

 

Advertisement

Udayavani is now on Telegram. Click here to join our channel and stay updated with the latest news.

Next