Advertisement

ಗೌಡರ ವಿರುದ್ಧದ ಒಮರ್‌ ಟ್ವೀಟ್‌ಗೆ ಟೀಕೆ

11:51 AM Apr 19, 2017 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವಹೇಳನಕಾರಿ ಟ್ವೀಟ್‌ ಮಾಡಿರುವುದನ್ನು ಖಂಡಿಸಿ ಜೆಡಿಎಸ್‌ ನಗರ ಘಟಕ ಮಂಗಳವಾರ ಪ್ರತಿಭಟನೆ ನಡೆಸಿತು.

Advertisement

ನಗರದ ಮೌರ್ಯ ವೃತ್ತದ ಬಳಿಯ ಗಾಂಧಿ ಪ್ರತಿಮೆ ಬಳಿ ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಹಾಗೂ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಓಮರ್‌ ಅಬ್ದುಲ್ಲಾ ಬಹಿರಂಗ ಕ್ಷಮೆಯಾಚನೆಗೆ ಆಗ್ರಹಿಸಿದರು. 

ಈ ವೇಳೆ ಮಾತನಾಡಿದ ಕುಪೇಂದ್ರರೆಡ್ಡಿ, “ದೇವೇಗೌಡರು ಪ್ರಧಾನಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳ ಬಗೆ ಒಮರ್‌ ಅಬ್ದುಲ್ಲಾ ಅವರು ತಮ್ಮ ತಂದೆಯನ್ನು ಕೇಳಿ ತಿಳಿದುಕೊಳ್ಳಲಿ. ದೇಶ ಕಂಡ ದಕ್ಷ ಹಾಗೂ ಮುತ್ಸದ್ಧಿ ರಾಜಕಾರಣಿ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ,’ ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, “ಒಮರ್‌ ಅಬ್ದುಲ್ಲಾ ಅವರು ತಮ್ಮ ಹೇಳಿಕೆ ವಾಪಸ್‌ ಪಡೆದು ತಕ್ಷಣ ದೇಶದ ಜನತೆಯ ಬಹಿರಂಗ ಕ್ಷಮೆಯಾಚಿಸಬೇಕು,’ಎಂದು ಒತ್ತಾಯಿಸಿದರು.ಶಾಸಕ ಗೋಪಾಲಯ್ಯ, ಮಾಜಿ ಉಪಮೇಯರ್‌ ಹೇಮಲತಾ ಗೋಪಾಲಯ್ಯ, ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್‌.ಪ್ರಕಾಶ್‌, ಬಿಬಿಎಂಪಿ ಯುವ ಘಟಕದ ಅಧ್ಯಕ್ಷ ರಮೇಶ್‌ಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next