Advertisement

ಗೌಡರ ಭೇಟಿ ಕೇವಲ ಔಪಚಾರಿಕ: ದೇಶಮುಖ

10:29 AM Jan 06, 2022 | Team Udayavani |

ಸೇಡಂ: ಮಾಜಿ ಪ್ರಧಾನಿಗಳಾದ ಎಚ್‌.ಡಿ. ದೇವೇಗೌಡ ಅವರ ನಮ್ಮ ನಿವಾಸದ ಭೇಟಿ ಕೇವಲ ಔಪಚಾರಿಕ ಭೇಟಿಯಾಗಿತ್ತು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಯುವ ಮುಖಂಡ ನಾಗರೆಡ್ಡಿ ಪಾಟೀಲ ದೇಶಮುಖ ಸ್ಪಷ್ಟಪಡಿಸಿದ್ದಾರೆ.

Advertisement

ಪಟ್ಟಣದ ಅವರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರಾದ ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ದೇಶಮುಖ ಮದನಾ ಅವರು, ಎಚ್‌ .ಡಿ. ದೇವೇಗೌಡರು ಮುಖ್ಯಮಂತ್ರಿ ಗಳಾಗಿದ್ದಾಗ ಶಾಸಕರಾಗಿದ್ದರು. ಅಲ್ಲದೆ ತೀರಾ ಹಳೆಯ ಗೆಳೆತನ ಇಬ್ಬರೂ ನಾಯಕರದ್ದಾಗಿರುವ ಕಾರಣ, ಸೇಡಂ ಬಂದಾಗ ನಮ್ಮ ಮನೆಗೆ ಬಂದು ಊಟ ಮಾಡಿ ಹೋಗಿದ್ದಾರೆ ಅಷ್ಟೆ. ದೇವೇಗೌಡರು ಸೇಡಂ ಬರುವುದಾಗಿ ಕೆಲ ದಿನಗಳ ಹಿಂದೆಯೇ ತಿಳಿಸಿದ್ದರು. ಅಲ್ಲದೆ ಬಂದಾಗ ನಿಮ್ಮ ಮನೆಯಲ್ಲಿ ಊಟ ಮಾಡ್ತೇನೆ ಅಂದಾಗ, ಬನ್ನಿ ಎಂದು ಆಹ್ವಾನಿಸಿದ್ದೆವು. ಈ ನಿಟ್ಟಿನಲ್ಲಿ ಬುಧವಾರ ಬಂದಾಗ ಬಂದು ನಮ್ಮ ಆತಿಥ್ಯ ಸ್ವೀಕರಿಸಿದ್ದಾರೆ. ಈ ಕುರಿತು ಯಾವುದೇ ರೀತಿಯ ರಾಜಕೀಯ ವಿಶ್ಲೇಷಣೆಗಳು ಬೇಡ. ನಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ. ಮುಂದಿನ ಬಾರಿ ರಾಜಕುಮಾರ ಪಾಟೀಲ ಅವರನ್ನು ಸಚಿವರನ್ನಾಗಿ ನೋಡುವ ಆಸೆ ಇದೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಮತ್ತೂಮ್ಮೆ ಶಾಸಕರನ್ನಾಗಿ ಮಾಡುತ್ತೇವೆ ಎಂದರು.

ರೆಡ್ಡಿ ಸಮಾಜದ ತಾಲೂಕು ಅಧ್ಯಕ್ಷ ನಾಗಭೂಷಣರೆಡ್ಡಿ ಹೂಡಾ, ಹಿರಿಯ ಮುಖಂಡ ಶರಣರೆಡ್ಡಿ ಜಿಲ್ಲೇಡಪಲ್ಲಿ, ಮುರುಗೇಂದ್ರರೆಡ್ಡಿ ಬಿಲಾಕಲ್‌, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ ಇತರರು ಈ ವೇಳೆ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next