Advertisement

Gowribidanur; ರೈಲ್ವೆ ನಿಲ್ದಾಣದಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

10:05 PM Aug 31, 2023 | Team Udayavani |

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣ ಮಾಡುವಾಗಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ನಿಲ್ದಾಣದಲ್ಲಿ ಇಳಿಯುತ್ತಿದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ  ನಡೆದಿದೆ.

Advertisement

ಮೂಲತಃ ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ ಎಂದು ತಿಳಿದು ಬಂದಿದೆ. ಚಂದ್ರಮ್ಮ 8 ತಿಂಗಳ ಗರ್ಭಿಣಿಯಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು.ಇನ್ನೂ ಚಿತ್ತಾಪುರ ಗ್ರಾಮದಲ್ಲಿ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿಕ ಜತೆ ಉದ್ಯಾನವನ ಎಕ್ಸ್ ಪ್ರೆಸ್ ಮೂಲಕ ಕಲ್ಬುರ್ಗಿ ಗೆ ಪ್ರಯಾಣ ಬೆಳೆಸಿದ್ದರು.ಇನ್ನೂ ರೈಲು ಬೆಂಗಳೂರಿನಿಂದ ಯಲಹಂಕ ತಲಪುಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿತ್ತು.ನಂತರ ರೈಲ್ವೆ. ಕಂಟ್ರೋಲ್ ರೂಂಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಿದ್ದರು.ಅದರಂತೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಇಳಿದು ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲು ಸಿದ್ದತೆ ಮಾಡಲಾಗಿತ್ತು.

ಆದರೆ ಚಂದ್ರಮ್ಮ ಗೌರಿಬಿದನೂರು ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಹೆರಿಗೆ ನೋವು ಮತ್ತಷ್ಟು ಹೆಚ್ಚಾಗಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಲ್ಲೇ ಹೆರಿಗೆ ಯಾಗಿದ್ದು,ಇಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು ತಾಯಿ, ಮಕ್ಕಳು ಆರೋಗ್ಯ ವಾಗಿದ್ದಾರೆ. ಇನ್ನೂ ಹೆರಿಗೆಯ ನಂತರ ಗೌರಿಬಿದನೂರು ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಾಣಂತಿಯ ಆರೈಕೆ ಮಾಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next