Advertisement

ಹೊಸ ಕಚೇರಿ ಕಟ್ಟಡ ಪೂರ್ಣಕ್ಕೆ ಗೋಯಲ್‌ ಸೂಚನೆ

09:58 AM Oct 10, 2021 | Team Udayavani |

ಕಲಬುರಗಿ: ಇಲ್ಲಿನ ನಗರ ಪೊಲೀಸ್‌ ಆಯುಕ್ತಾಲಯದ ಹಿಂಭಾಗದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಪೊಲೀಸ್‌ ಆಯುಕ್ತಾಲಯ ಕಚೇರಿ ಕಟ್ಟಡ ಕಾಮಗಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಡಾ| ರಜನೀಶ ಗೋಯಲ್‌ ಶನಿವಾರ ಪರಿಶೀಲಿಸಿದರು.

Advertisement

ಪೊಲೀಸ್‌ ಆಯುಕ್ತ ಡಾ| ವೈ.ಎಸ್. ರವಿಕುಮಾರ, ಉಪ ಪೊಲೀಸ್‌ ಆಯುಕ್ತ ಅಡೂರು ಶ್ರೀನಿವಾಸಲು ಅವರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ಅವರು, ಎಂಜಿನಿಯರ್‌ಗಳಿಂದ ಮಾಹಿತಿ ಸಂಗ್ರಹಿಸಿದರು. ಕಟ್ಟಡ ನಿರ್ಮಾಣ ಕೆಲಸವನ್ನು ಜನವರಿ ಅಂತ್ಯದೊಳಗೆ ಮುಗಿಸಲು ಸಮಯಾವಕಾಶ ಇದೆ. ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಾಧ್ಯವಾಗದೇ ಇದ್ದಲ್ಲಿ ಫೆಬ್ರುವರಿ ತಿಂಗಳ ಅಂತ್ಯದೊಳಗೆ ಮುಗಿಸಿ 3 ತಿಂಗಳಲ್ಲಿ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸುವಂತೆ ರಜನೀಶ ಗೋಯಲ್‌ ಸೂಚಿಸಿದರು. ರಾಜ್ಯದಲ್ಲೇ ಮಾದರಿಯಾಗಿರುವ ಪೊಲೀಸ್‌ ಆಯುಕ್ತಾಲಯದ ಕಚೇರಿ ಇದಾಗಲಿದೆ. ಬಹುತೇಕ ಎಲ್ಲ ಅಧಿಕಾರಿಗಳ ಕಚೇರಿಗಳು ಒಂದೇ ಸೂರಿನಲ್ಲಿ ಬರಲಿವೆ ಎಂದರು. ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನು ನಡೆಸಿದರು. ಲೋಕೋಪಯೋಗಿ ಇಲಾಖೆ ಮುಖ್ಯ ಅಭಿಯಂತರ ಜಗನ್ನಾಥ ಹಲಿಂಗೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next