Advertisement

ಗೋವಾ: ಉದ್ಯೋಗ ಹಗರಣದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್

05:45 PM Dec 13, 2021 | Team Udayavani |

ಪಣಜಿ: ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಭ್ರಷ್ಟಚಾರದ ತನಿಖೆಗಾಗಿ ಕಾಂಗ್ರೆಸ್ ಪಕ್ಷವು ಸೋಮವಾರ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

Advertisement

ಅಕ್ಟೋಬರ್ 15 ರಿಂದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ರದ್ಧುಗೊಳಿಸಬೇಕು ಮತ್ತು ಸಿಬಿಐ ತನಿಖೆಗೆ ಕಾಂಗ್ರೆಸ್ ಒತ್ತಾಯಿಸಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಿರೀಶ್ ಚೋಡಣಕರ್, ಅಮರನಾಥ ಪಣಜೀಕರ್ ಮತ್ತಿತರರು ಉಪಸ್ಥಿತರಿದ್ದರು.

ಮತ್ತೊಂದೆಡೆಗೆ ಆಡಳಿತ ಪಕ್ಷದ ಶಾಸಕ ಬಾಬೂಷ್ ಮೊನ್ಸೆರಾತ್ ರವರು ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಲೊಕೋಪಯೋಗಿ ಇಲಾಖೆಯಲ್ಲಿ ನಡೆದಿರುವ ನೇಮಕಾತಿ ಹಗರಣದ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಶಾಸಕ ಮೊನ್ಸೆರಾತ್ ಸರ್ಕಾರವನ್ನು ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next