Advertisement
ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಡಿಮೆ ಅವಧಿಯಲ್ಲಿ ಹಂತಹಂತವಾಗಿ ಗ್ರಾ.ಪಂ. ನೌಕರರ ಶ್ರೇಯೋಭಿವೃದ್ಧಿಗಾಗಿ ಸರಕಾರ ಹಲವು ಸೌಲಭ್ಯಗಳನ್ನು ಜಾರಿಗೊಳಿಸಿದೆ. ಸುಮಾರು 11 ಸಾವಿರ ಮಂದಿ ಗ್ರಾ.ಪಂ. ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ನೌಕರರ ಸಂಘದ ಅಧ್ಯಕ್ಷ ಎಂ.ಬಿ. ನಾಡಗೌಡ ಮತ್ತಿತರ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.