Advertisement

Mangaluru ಅತಿಥಿ ಉಪನ್ಯಾಸಕರಿಂದ ಪದವಿ ತರಗತಿ ಬಹಿಷ್ಕಾರ

12:26 AM Dec 06, 2023 | Team Udayavani |

ಮಂಗಳೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಕಾಲೇಜುಗಳಲ್ಲಿ ಡಿ. 6ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಅತಿಥಿ ಉಪನ್ಯಾಸಕರು ತೀರ್ಮಾನಿಸಿದ್ದಾರೆ.

Advertisement

ಎರಡೂ ಜಿಲ್ಲೆಯ 600ರಷ್ಟು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕಾರ ನಡೆಸುವ ಸಾಧ್ಯತೆಯಿದೆ. ಸರಕಾರದ ಸಿಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಕ್ರಮಾತಿ ಗೊಳಿಸಬೇಕು, ಸಹಜ ನೌಕರನಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಹಾಗೂ ಮಂಗಳೂರು ವಿ.ವಿ. ವ್ಯಾಪ್ತಿಯ ಎಲ್ಲ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು.

ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ. ಡಿ. 7ರ ಒಳಗೆ ಸೂಕ್ತ ಸ್ಪಂದನೆ ನೀಡದೇ ಇದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದ.ಕ ಜಿಲ್ಲಾ ಅಧ್ಯಕ್ಷ ಧೀರಜ್‌ ಕುಮಾರ್‌, ಪ್ರಧಾನ ಕಾರ್ಯದರ್ಶಿ ಮಹಾಂತೇಶ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next