Advertisement

ಪದವೀಧರ ಕ್ಷೇತ್ರ: ಮತದಾರರ ನೋಂದಣಿ ಇಳಿಮುಖ

11:17 PM Jan 21, 2020 | Lakshmi GovindaRaj |

ಬೆಂಗಳೂರು: ರಾಜ್ಯದ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಹೊರತುಪಡಿಸಿ ಪಶ್ಚಿಮ ಪದವೀಧರ ಹಾಗೂ ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಯಲ್ಲಿ ಗಣನೀಯ ಇಳಿಕೆಯಾಗಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಅಧ್ಯಯನ ಸಮಿತಿ ರಚಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಮಂಗಳವಾರ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಮತದಾರರ ಅಂತಿಮ ಪಟ್ಟಿ ಕುರಿತು ಮಾಹಿತಿ ನೀಡಿ, ಈ ವರ್ಷದ ಜೂ.30ಕ್ಕೆ ತೆರವಾಗುವ ವಿಧಾನಪರಿಷತ್‌ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಕಾರ್ಯ ನಡೆಯುತ್ತಿದೆ ಎಂದರು.

ಜ.16ರಂದು ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದರನ್ವಯ ಆಗ್ನೇಯ ಪದವೀಧರ ಕ್ಷೇತ್ರ ಹೊರುತಪಡಿಸಿದರೆ ಪಶ್ಚಿಮ ಪದವೀಧರ, ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಮತದಾರರ ನೋಂದಣಿಯಲ್ಲಿ ಇಳಿಮುಖ ವಾಗಿದೆ. ನೋಂದಣಿ ಸಂಖ್ಯೆಯ ಇಳಿಕೆಗೆ ಕಾರಣಗಳೇನು ಎಂಬುದನ್ನು ತಿಳಿದುಕೊಳ್ಳುವ ನಿಟ್ಟಿನಲ್ಲಿ ಅಧ್ಯಯನ ಸಮಿತಿ ರಚನೆ ಮಾಡಲಾಗುವುದು ಎಂದು ಹೇಳಿದರು.

ಮತದಾರರ ನೋಂದಣಿ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಚುನಾವಣೆ ನಡೆಯುವ ಕ್ಷೇತ್ರದ ಮತದಾರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಜೂನ್‌ವರೆಗೆ ನೋಂದಣಿ ಮಾಡಿಕೊಳ್ಳಲು ಸಮಯ ವಕಾಶವಿದೆ. ಅರ್ಜಿಯ ಪರಿಶೀಲನೆಗೆ ಸಮಯ ಬೇಕಾಗಲಿರುವ ಕಾರಣ ಕಡೆಯ ದಿನದವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸಿ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ಯಾವ ಕ್ಷೇತ್ರ ಯಾವ ವ್ಯಾಪ್ತಿಗೆ?: ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು, ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪ್ಪನಹಳ್ಳಿ ತಾಲೂಕು ಹೊರತು ಪಡಿಸಿ) ಜಿಲ್ಲೆಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ (ಹರಪ್ಪನಹಳ್ಳಿ ತಾಲೂಕು ಸೇರಿಸಿ) ಜಿಲ್ಲೆಗಳು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು,

Advertisement

ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳು ಸೇರ್ಪಡೆಯಾಗಲಿವೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬೆಳಗಾವಿ ಪ್ರಾದೇಶಿಕ ಆಯುಕ್ತರು, ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿ ಗಳಾಗಿರ ಲಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿ ಕಾರಿ ಯಾಗಿರುವರು ಎಂದರು.

ಕ್ಷೇತ್ರ 2014ರಲ್ಲಿ ಮತದಾರರು ಪ್ರಸ್ತುತ ಮತದಾರರು
ಪಶ್ಚಿಮ ಪದವೀಧರ ಕ್ಷೇತ್ರ 94,352 68,049
ಆಗ್ನೇಯ ಪದವೀಧರ ಕ್ಷೇತ್ರ 98,337 1,02,287
ಈಶಾನ್ಯ ಶಿಕ್ಷಕರ ಕ್ಷೇತ್ರ 31,809 24,941
ಬೆಂಗಳೂರು ಶಿಕ್ಷಕರ ಕ್ಷೇತ್ರ 36,916 17,610

Advertisement

Udayavani is now on Telegram. Click here to join our channel and stay updated with the latest news.

Next