Advertisement

ಪದವೀಧರ, ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದಿನಿಂದ ವಿಜಯೇಂದ್ರ ರಾಜ್ಯ ಪ್ರವಾಸ

08:14 PM May 24, 2024 | Team Udayavani |

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿನಿಂದ ರಾಜ್ಯ ಪ್ರವಾಸ ನಡೆಸಲಿದ್ದಾರೆ.

Advertisement

ಈ ಆರು ಕ್ಷೇತ್ರದ ಚುನಾವಣೆ ಬಿಜೆಪಿಗೆ ನಿರ್ಣಾಯಕವಾಗಿರುವುದರಿಂದ ಗಂಭೀರವಾಗಿ ಪರಿಗಣಿಸಿ ಖುದ್ದು ಅಖಾಡಕ್ಕೆ ಇಳಿದಿದ್ದು, ಶನಿವಾರ ದಾವಣಗೆರೆ ಜಿಲ್ಲಾದ್ಯಂತ ಪ್ರವಾಸ ನಡೆಸಿ ಪಕ್ಷದ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧನಂಜಯ್‌ ಸರ್ಜಿ ಅವರನ್ನು ಗೆಲ್ಲಿಸಿಕೊಳ್ಳುವುದು ವಿಜಯೇಂದ್ರ ಅವರಿಗೆ ಪ್ರತಿಷ್ಠೆಯಾಗಿದೆ. ಈ ಕ್ಷೇತ್ರದಲ್ಲಿ ಮಾಜಿ ಶಾಸಕ ರಘುಪತಿ ಭಟ್‌ ಬಂಡಾಯ ಸ್ಪರ್ಧೆಯಿಂದ ತುಸು ಪೈಪೋಟಿ ಇದೆ. ಅಲ್ಲದೇ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ದಾವಣಗೆರೆ ಭಾಗದಲ್ಲಿ ನಾಯಕರನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ.

ಲೋಕಸಭಾ ಚುನಾವಣಾ ಫ‌ಲಿತಾಂಶದ ಬೆನ್ನಲ್ಲೇ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತದೆ. ಲೋಕ ಸಮರದಲ್ಲಿ ಗೆದ್ದು ಮೇಲ್ಮನೆ ಚುನಾವಣೆಯಲ್ಲಿ ಹಿನ್ನಡೆಯಾದರೆ ನಾಯಕತ್ವದ ಬಗ್ಗೆ ವ್ಯತಿರಿಕ್ತ ಚರ್ಚೆಯಾಗಬಹುದು. ಹೀಗಾಗಿ ರಾಜ್ಯ ಪ್ರವಾಸ ನಡೆಸಿ ಎಲ್ಲರ ವಿಶ್ವಾಸ ಗಳಿಸುವಂತೆ ಖುದ್ದು ಯಡಿಯೂರಪ್ಪನವರೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next