Advertisement
ನಗರದ ಸಾರ್ವಜನಿಕ ಉಪನಿರ್ದೇಶಕರ ಕಚೇರಿ ಆವರಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶಾಲಾ ಶಿಕ್ಷಕರು, ಕೆಲ ಕಾಲ ಧರಣಿ ನಡೆಸಿದ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Related Articles
Advertisement
ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿ: ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸಿದಾಗ ಮುಖ್ಯಶಿಕ್ಷಕ, ದೈಹಿಕ ಶಿಕ್ಷಕರನ್ನು ಹೊರತುಪಡಿಸಿ, ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ ಬಗೆಹರಿಸಿ: 6ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸಿನ ಪ್ರಕಾರ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಗಳನ್ನು ನೀಡಬೇಕು. ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕ-ನೌಕರರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ರವಿಶಂಕರ್, ಮುಖಂಡರಾದ ಕೆ.ಯುವರಾಜ್, ಪ್ರಧಾನ ಕಾರ್ಯದರ್ಶಿ ಮಂಜುನಾಥ, ನಾಗೇಶ್, ಕೆ.ಎಂ.ಚಂದ್ರಶೇಖರ್, ಲಿಂಗೇಗೌಡ, ಸ್ಮಿತಾರಾಣಿ, ಸಿದ್ದಲಿಂಗ, ತಿಮ್ಮೇಶ್, ಕೃಷ್ಣ, ಯುವರಾಜ, ಶಿವರಾಮೇಗೌಡ ಮತ್ತಿತರರು ಉಪಸ್ಥಿತರಿದ್ದರು.