Advertisement

ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭ

08:47 PM Jul 10, 2022 | Team Udayavani |

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಿಗೆ ಇಂದಿನಿಂದ (ಜು.11) ಪ್ರವೇಶಾತಿ ಪ್ರಕ್ರಿಯೆಗಳು ನಡೆಯಲಿವೆ.

Advertisement

ಇದೇ ಮೊದಲ ಬಾರಿಗೆ ಆನ್‌ಲೈನ್‌ ಮೂಲಕವೇ ಪ್ರವೇಶಾತಿ ನಡೆಸುವುದಾಗಿ ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಜೂ.18ರಂದು ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟವಾಗಿದ್ದು, ಫ‌ಲಿತಾಂಶದ ಮಾರನೆಯ ದಿನವಾದ ಜೂ.19ರಿಂದಲೇ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ. ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿವೆ. ಆದರೆ, ಸರ್ಕಾರಿ ಕಾಲೇಜುಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್‌) ತಂತ್ರಾಂಶದಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಾಗಿದ್ದರಿಂದ ಸರ್ಕಾರವು ಜು.11ರಿಂದ ಅಧಿಕೃತವಾಗಿ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ಆ ಪ್ರಕಾರವಾಗಿ ಸೋಮವಾರದಿಂದ ಪ್ರವೇಶಾತಿ ಪ್ರಕ್ರಿಯೆಗಳು ಚುರುಕುಗೊಳ್ಳಲಿವೆ. ಎನ್‌ಇಪಿ ಜಾರಿಯಲ್ಲಿರುವುದರಿಂದ ಕಾಲೇಜಿನಲ್ಲಿರುವ ಕೋರ್ಸ್‌ಗಳ ಪೈಕಿ ವಿದ್ಯಾರ್ಥಿಗಳು ತಾವು ಇಚ್ಛಿಸಿದ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ಈ ವರ್ಷದಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಏಕರೀತಿಯ ವೇಳಾಪಟ್ಟಿ ಪ್ರಕಟಿಸಲಿದೆ. ಹೀಗಾಗಿ, ಜು.11ರಿಂದ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಆ.17ರಿಂದ ತರಗತಿಗಳು ಆರಂಭವಾಗಲಿದೆ. ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಶೇ.61.88 ಫ‌ಲಿತಾಂಶ ಪ್ರಕಟವಾಗಿದ್ದು, ಸದ್ಯ 4,22,966 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next