Advertisement
ಎರಡನೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳ 114 ಗ್ರಾಮ ಪಂಚಾಯತ್‌ಗಳ 1,500 ಸ್ಥಾನಗಳಿಗೆ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು ತಾಲೂಕಿನ 86 ಗ್ರಾ.ಪಂ.ಗಳ 1,178 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆಗೆ ಸಂಬಂಧಿಸಿ ಸೂಕ್ತ ಪೊಲೀಸ್ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ಬೂತ್‌ನಲ್ಲಿ ಪೊಲೀಸ್/ಗೃಹರಕ್ಷಕ ದಳ ಸಿಬಂದಿಯನ್ನು ನಿಯೋಜಿಸಲಾಗಿದೆ. ಸಿಪಿಐ, ಪಿಎಸ್‌ಐ, ಎಸ್‌ಐ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ನಿಗಾ ವಹಿಸಲಿದೆೆ. ಇದಲ್ಲದೆ ಕೆಎಸ್‌ಆರ್‌ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಮೊಬೈಲ್ ವಾಹನಗಳು ಗಸ್ತು ನಡೆಸಲಿವೆ.
Related Articles
ಕೊರೊನಾ ಹಿನ್ನೆಲೆಯಲ್ಲಿ ಮತಗಟ್ಟೆಗಳಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಮತದಾನ ಕೇಂದ್ರದ ಪ್ರವೇಶ ದ್ವಾರದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಯನ್ನು ನಿಯೋಜಿಸಿ ಮತದಾನ ಕೊಠಡಿಯೊಳಗೆ ಪ್ರವೇಶಿಸುವ ಪ್ರತಿಯೋರ್ವನನ್ನು ಕೊರೊನಾ ಥರ್ಮಲ್ ಜ್ವರ ತಪಾಸಣೆ ಮಾಡಲಾಗುತ್ತದೆ. ಎಲ್ಲರೂ ಮಾಸ್ಕ್ ಧರಿಸಿರುವುದು ಹಾಗೂ ಸ್ಯಾನಿಟೈಸರ್ ಬಳಸಿ ಕೈಗಳನ್ನು ಶುಚಿಗೊಳಿಸಿಕೊಳ್ಳಬೇಕು. ಕೊರೊನಾ ಸೋಂಕಿತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ.
Advertisement
ನಿಯಮ ಉಲ್ಲಂಘಿಸಿ ಜಾಥಾಉಪ್ಪಿನಂಗಡಿ: ಚುನಾವಣೆಯ ಮುನ್ನಾ ದಿನವಾದ ಶನಿವಾರ ಶಿರಾಡಿ ಗ್ರಾಮದಲ್ಲಿ ನಿಯಮ ಉಲ್ಲಂಘಿಸಿ ಜನರಲ್ಲಿ ಭೀತಿ ಮೂಡಿಸುವ ರೀತಿಯಲ್ಲಿ ರಾಜಕೀಯ ಪಕ್ಷವೊಂದರ ಕಾರ್ಯಕರ್ತರು ವಾಹನ ಜಾಥಾ ನಡೆಸಿರುವ ಬಗ್ಗೆ ಕಡಬ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿಗೆ ಸಾಮಾಜಿಕ ಹೋರಾಟಗಾರ ಕಿಶೋರ್ ಶಿರಾಡಿ ದೂರು ನೀಡಿದ್ದಾರೆ.