Advertisement

ಗ್ರಾ.ಪಂ. ಚುನಾವಣೆ: ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ ಗೋವಾ ಸರಕಾರ

07:19 PM Jul 04, 2022 | Team Udayavani |

ಪಣಜಿ: ಗೋವಾ ರಾಜ್ಯ ಗ್ರಾ.ಪಂ. ಚುನಾವಣೆಗೆ ಸಂಬಂಧಿಸಿದಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠದ ಆದೇಶವನ್ನು ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

Advertisement

ಆಗಸ್ಟ್ 12 ರ ಒಳಗೆ ಪಂಚಾಯತ್ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠ ಆದೇಶಿಸಿತ್ತು. ಆದರೆ ರಾಜ್ಯ ಸರ್ಕಾರವು ಇನ್ನೊಂದು ತಿಂಗಳು ಕಾಲಾವಕಾಶ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯವು ಈ ಕುರಿತು ಸಮ್ಮತಿಸದ ಕಾರಣ ಆಗಸ್ಟ್ 10 ರಂದು ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿತ್ತು.

ಪಂಚಾಯತ್ ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರವು ಇದೀಗ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next