Advertisement

ಗೋವಾದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ವೇಳಾಪಟ್ಟಿ ಪ್ರಕಟ

06:44 PM Jul 16, 2022 | Team Udayavani |

ಪಣಜಿ: ಗೋವಾ ರಾಜ್ಯ ಗ್ರಾಮ ಪಂಚಾಯತ್ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು ಆಗಸ್ಟ್ 10 ರಂದು ಗೋವಾದಲ್ಲಿ ಪಂಚಾಯತ್ ಚುನಾವಣಾ ಮತದಾನ ಪ್ರಕ್ರಿಯೆ ನಡೆಯಲಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಇಂದಿನಿಂದಲೇ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾಗಿದೆ  ಎಂದು ರಾಜ್ಯ ಚುನಾವಣಾ ಆಯೋಗ ಶನಿವಾರ ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದೆ.

Advertisement

ಪಂಚಾಯತ್ ಚುನಾವಣೆಗೆ ಜುಲೈ 18 ರಿಂದ 25 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜುಲೈ 26 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜುಲೈ 27 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಆಗಸ್ಟ್ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಆಗಸ್ಟ್ 12 ರಂದು ಮತ ಎಣಿಕಾ ಕಾರ್ಯ ನಡೆಯಲಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಗ್ರಾ.ಪಂ ಚುನಾವಣೆಯನ್ನು ಮಳೆಗಾಲದ ನಂತರ ನಡೆಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿತ್ತು. ಆದರೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಇದೀಗ ಆಗಸ್ಟ್ 10 ರಂದು ಚುನಾವಣೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next