Advertisement

ಕೊರಟಗೆರೆಯಲ್ಲಿ ಎಸಿಬಿ ಮಿಂಚಿನ ಕಾರ್ಯಾಚರಣೆ: ಗ್ರಾ. ಪಂ. ಕಾರ್ಯದರ್ಶಿ ಬಲೆಗೆ

04:52 PM May 04, 2022 | Team Udayavani |

ಕೊರಟಗೆರೆ: ತುಮಕೂರು ತಾಲ್ಲೂಕು ಅರಕೆರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

Advertisement

ಖಾಲಿ ನಿವೇಶನದ ಕುರಿತು ಅರುಣ್ ಕುಮಾರ್ ಎನ್ನುವವರು ಅರ್ಜಿ ನೀಡಿದ್ದು ಪಂಚಾಯತ್ ಕಾರ್ಯದರ್ಶಿ ಶ್ರೀಧರ್ 7500 ಲಂಚಕ್ಕೆ  ಬೇಡಿಕೆ ಇಟ್ಟು 3000 ಹಣ ಮುಂಗಡವಾಗಿ ಪಡೆದು ಉಳಿದ 4500 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.

ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ಯಾವುದೇ ಕೆಲಸ ಪಡೆಯಬೇಕಿದ್ದರೆ ಅಧಿಕಾರಿಗಳಿಗೆ ಲಂಚ ನೀಡಲೇಬೇಕು
ಎಸಿಬಿ ಅಧಿಕಾರಿಗಳಿಂದ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟದಿಂದ ಬಡ ರೈತರು ಮತ್ತು ಮಧ್ಯಮ ವರ್ಗದ ಸಾರ್ವಜನಿಕರು ಅಲ್ಪಪ್ರಮಾಣದ ನಿಟ್ಟುಸಿರು ಬಿಡುವಂತಾಗಿದೆ. ಇದೇ ತಿಂಗಳಲ್ಲಿ ಒಬ್ಬ ಭ್ರಷ್ಟ ಅಧಿಕಾರಿ ಸಿಕ್ಕಿ ಬಿದ್ದು ಜೈಲು ಪಾಲಾದರೂ ಲಂಚಾವತಾರ ಬಿಡದೆ ಅಧಿಕಾರಿಗಳು ಸರಣಿ ಭ್ರಷ್ಟಾಚಾರ ಮುಂದುವರೆಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಅವರ ಹೋರಾಟಕ್ಕೆ, ಎಸಿಬಿ ಅಧಿಕಾರಿಗಳ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಿಇಒ ವಿದ್ಯಾಕುಮಾರಿ ನಿರ್ಲಕ್ಷ್ಯ ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್ ಕುಮ್ಮಕ್ಕಿ ನಿಂದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹೇಳೋರು ಇಲ್ಲ ಕೇಳೋರು ಇಲ್ಲದ ಹಾಗಾಗಿದೆ. ನರೇಗಾ ಕೆಲಸ ಕಳಪೆ ಗುಣಮಟ್ಟದ ಕಾಮಗಾರಿ ಕೆಲವು ಕೆಲಸ ಮಾಡದೆ ಬಿಲ್ ಮಾಡಿಕೊಳ್ಳುತ್ತಾರೆ.  ಸ್ಟ್ರೀಟ್ ಲೈಟ್ ಬಲ್ಬ್ ಹಗರಣ, ಮೋಟಾರ್ ಪಂಪ್ ಸೆಟ್ ಕೊಳ್ಳುವುದರಲ್ಲಿ ಕಳಪೆ ಹಗರಣ, ನರೇಗಾ ಹಣ ಬಿಡುಗಡೆ ಮಾಡಲು ಇಂಜಿನಿಯರ್ ಪಿಡಿಒ 30% ಕಮಿಷನ್ . ಗ್ರಾಮಪಂಚಾಯತ್ ಗಳಲ್ಲಿ ಸಾಲು ಸಾಲು ಹಗರಣ ಸರಮಾಲೆ ನಡೆಯುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಪತ್ರಕರ್ತ ಜೆಟ್ಟಿ ಅಗ್ರಹಾರ ನಾಗರಾಜು ಬೇಸರ ವ್ಯಕ್ತಪಡಿಸಿದರು.

Advertisement

ಕಾರ್ಯಾಚರಣೆ  ವೇಳೆ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಇನ್ಸ್ ಪೆಕ್ಟರ್ ವಿರೇಂದ್ರ ವಿಜಯಲಕ್ಷ್ಮಿ ನರಸಿಂಹರಾಜು ಚಂದ್ರು, ಶಿವಣ್ಣ,  ನವೀನ್ ಕುಮಾರ್, ಸುರೇಶ್ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next