Advertisement

ಗ್ರಾಮ ಪಂಚಾಯತ್ ಚುನಾವಣೆ: ಮೊದಲ ಹಂತದ ಮತದಾನ ಆರಂಭ

07:34 AM Dec 22, 2020 | keerthan |

ಮಣಿಪಾಲ: ರಾಜ್ಯದಲ್ಲಿ ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ರಾಜ್ಯದ 117 ತಾಲೂಕುಗಳ 3019 ಗ್ರಾಮ ಪಂಚಾಯತಿಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

Advertisement

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಐದರವರೆಗೆ ನಡೆಯಲಿದೆ. ಕರಾವಳಿ ಭಾಗದಲ್ಲಿ ಮುಂಜಾನೆಯ ಚಳಿಯ ನಡುವೆಯೂ ಜನರು ಮತಗಟ್ಟೆಯ ಕಡೆ ಸಾಗುತ್ತಿರುವ ದೃಶ್ಯಗಳು ಕಂಡುಬಂದವು.

ಕೋವಿಡ್-19 ಸೋಂಕು ಭೀತಿಯ ಕಾರಣ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಮತದಾನ ನಡೆಸಲಾಗುತ್ತಿದೆ. ಚುನಾವಣೆಗೆ ಸಂಬಂಧಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಆರ್ ಪಿಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಅವಧಿ ಮುಗಿದ 5,728 ಗ್ರಾ.ಪಂ.ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಿಗದಿಪಡಿಸಿ ರಾಜ್ಯ ಚುನಾವಣ ಆಯೋಗ ನ. 30ಕ್ಕೆ ಅಧಿಸೂಚನೆ ಹೊರಡಿಸಿತ್ತು. ಮೊದಲ ಹಂತದ ಚುನಾವಣೆಗೆ ಡಿ. 22ಕ್ಕೆ ಮತದಾನ ನಡೆಯಲಿದೆ. ಇದಕ್ಕಾಗಿ 1,64,550 ನಾಮಪತ್ರಗಳು ಸ್ವೀಕೃತವಾಗಿದ್ದವು. 1,57,735 ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಾಮಪತ್ರ ಪರಿಶೀಲನೆ ಬಳಿಕ 40,352 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದು, 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗ 43,238 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದಕ್ಕಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next