ಚಿಕ್ಕಬಳ್ಳಾಪುರ: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ, ಸ್ಥಳೀಯ ಮಟ್ಟದಲ್ಲಿ ಸಂಪನ್ಮೂಲ ಕ್ರೋಡೀಕರಿಸುವ, ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ಕ್ರಿಯಾ ಯೋಜನೆ ತಯಾರಿಸಬೇಕೆಂದು ಜಿಪಂ ಸಿಇಒ ಪಿ.ಶಿವಶಂಕರ್ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಪಿಡಿಒ, ಸಿಬ್ಬಂದಿಗೆ ಗ್ರಾಪಂ ದೂರದೃಷ್ಟಿ ಯೋಜನೆ ಕುರಿತು ಜಾಗೃತಿ ಮೂಡಿಸಲು ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಗ್ರಾಪಂನಲ್ಲಿ ಲಭ್ಯ ಇರುವ ಅನುದಾನ ಬಳಸಿಕೊಂಡು ಸ್ಥಳೀಯ ಮಟ್ಟದಲ್ಲಿ ಸಂಪನ್ಮೂಲ ಕ್ರೋಡೀಕರಿಸುವ ನಿಟ್ಟಿನಲ್ಲಿ ಪಿಡಿಒ, ತಾಪಂ ಇಒ ಕಾರ್ಯನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸುವ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ದೂರದೃಷ್ಟಿಯ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದರು. ಅನೇಕ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಇಲ್ಲ: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಕೋಟ್ಯಂತರ ರೂ. ಖರ್ಚು ಮಾಡಿದರೂ ಹಲವು ಗ್ರಾಮಗಳಲ್ಲಿ ಮೂಲ ಸಮಸ್ಯೆಗಳಿಗೆ ಮುಕ್ತಿಯಿಲ್ಲ ಎಂಬ ದೂರು ಕೇಳಿ ಬರುತ್ತಿದೆ.
ವ್ಯಾಪಕವಾಗಿ ಮಳೆಯಾದರೂ ನೀರಿನ ಸಮಸ್ಯೆ ಕಾಡುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕೋಟ್ಯಂತರ ರೂ. ಖರ್ಚು ಮಾಡಿದರೂ ಅನೇಕ ಸಮಸ್ಯೆಗೆ ಶಾಶ್ವತ ಮುಕ್ತಿ ಇಲ್ಲದಂತಾಗಿದೆ ಎಂದು ಹೇಳಿದರು. ದೂರುದೃಷ್ಟಿ ಇರಲಿ: ಅದನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ಐದು ವರ್ಷಗಳ ಅವ ಧಿಯಲ್ಲಿ ಗ್ರಾಪಂಗೆ ಆದಾಯ ವೃದ್ಧಿಸಿಕೊಳ್ಳುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೂಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೂರದೃಷ್ಟಿಯಿಂದ ಕಾರ್ಯನಿರ್ವಹಿಸಬೇಕೆಂದು ಜಿಪಂ ಸಿಇಒ ತಾಕೀತು ಮಾಡಿದರು.
ಗಾಂಧಿ ಕನಸು ನನಸು ಮಾಡಿ: ಗ್ರಾಪಂ ಮಟ್ಟದಲ್ಲಿ ಲಭ್ಯ ಇರುವ ಭೌಗೋಳಿಕ, ಆರ್ಥಿಕ ಮತ್ತು ನೈಸರ್ಗಿಕ ಸಂಪನ್ಮೂಲ ಕ್ರೋಡೀಕರಿಸಿ ಗ್ರಾಮೀಣ ಮೂಲ ಸೌಲಭ್ಯ ವೃದ್ಧಿಸಿಕೊಳ್ಳಲು ಗ್ರಾಪಂ ಜೊತೆಗೆ ಜನರ ಜಬಾವಾªರಿ, ಕರ್ತವ್ಯಗಳ ಕುರಿತು ವ್ಯಾಪಕವಾಗಿ ಅರಿವು ಮೂಡಿಸಬೇಕು.
ಉದ್ಯೋಗ ಖಾತ್ರಿ, 15ನೇ ಹಣಕಾಸು ಯೋಜನೆ, ಜಲಾಮೃತ, ಸ್ವತ್ಛ ಭಾರತ ಮಿಷನ್ ಅಭಿಯಾನ ಇನ್ನಿತರೆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು, ಶಿಕ್ಷಣ, ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಪರಿಸರ, ಕುಡಿಯುವ ನೀರು ಸಂರಕ್ಷಣೆ ಮಾಡುವ ಕಾಮಗಾರಿಗಳನ್ನು ನಡೆಸಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸು ನನಸು ಮಾಡಬೇಕೆಂದು ಸಲಹೆ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್, ಮುಖ್ಯ ಯೋಜನಾಧಿ ಕಾರಿ ಧನುರೇಣುಕಾ ಅವರು, ಗ್ರಾಪಂ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ ದೂರದೃಷ್ಟಿ ಯೋಜನೆಯ ಮಾರ್ಗೋಪಾಯಗಳ ಬಗ್ಗೆ ತಿಳಿಸಿಕೊಟ್ಟರು.