Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂದುವರಿದ ಗ್ರಾಮ ಸ್ವರಾಜ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸಲು ಜಿಲ್ಲೆಯಲ್ಲಿ ಮುಂದುವರಿದ ಗ್ರಾಮ ಸ್ವರಾಜ್ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಈ ಗ್ರಾಮಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ, ಸೌಭಾಗ್ಯ (ಬಿಜಲಿ ಹರ ಘರ ಯೋಜನಾ), ಉಜಾಲಾ ಯೋಜನಾ, ಪ್ರಧಾನಮಂತ್ರಿ ಜನಧನ ಯೋಜನಾ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನಾ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ ಹಾಗೂ ಇಂದ್ರಧನುಷ್ ಯೋಜನೆಯಿಂದ ವಂಚಿತ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆ ಲಾಭ ದೊರಕಿಸಬೇಕೆಂದು ಸೂಚಿಸಿದರು.
Related Articles
Advertisement
ಇಂದ್ರಧನುಷ: 67 ಗ್ರಾಮಗಳಲ್ಲಿ ಈಗಾಗಲೇ ಇಂದ್ರ ಧನುಷ್ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೇ. 91 ರಷ್ಟು ಲಸಿಕೆ ಗುರಿ ತಲುಪಲಾಗಿದೆ. ಉಳಿದ ಗುರಿ ತಲುಪಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸೌಭಾಗ್ಯ ಯೋಜನೆ: ವಿದ್ಯುತ್ ಸಂಪರ್ಕ ಹೊಂದಿರದ ಬಿ.ಪಿ.ಎಲ್. ಮತ್ತು ಎ.ಪಿ.ಎಲ್. ಕುಟುಂಬಗಳನ್ನು ಗುರುತಿಸಿಅವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದೆ. ಈ ಹಿಂದೆ ಕೈಗೊಂಡ ಸಮೀಕ್ಷೆಯಂತೆ 67 ಗ್ರಾಮಗಳಲ್ಲಿ 1928 ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ. ಆದಷ್ಟು ಬೇಗ ಈ ಕುಟುಂಬಗಳ ಮನೆಗಳಿಗೆ ವಿದ್ಯುತ್ ಸಂಪಕ್ ಕಲ್ಪಿಸಬೇಕು. ಇನ್ನೊಮ್ಮೆ ಮರು ಸಮೀಕ್ಷೆ ಕೈಗೊಂಡು ವರದಿ ನೀಡಬೇಕು ಎಂದರು. ಉಜಾಲಾ ಯೋಜನೆ: ಉಜಾಲಾ ಯೋಜನೆಯಡಿ ಜಿಲ್ಲೆಯಲ್ಲಿ ಗುಲ್ಬರ್ಗಾ ಒನ್ ಹಾಗೂ ಮುಖ್ಯ ಅಂಚೆ ಕಚೇರಿಯಲ್ಲಿ ಮಾತ್ರ ಸಹಾಯಧನದ ಎಲ್.ಇ.ಡಿ. ಬಲ್ಬ್ಗಳನ್ನು ವಿತರಿಸಲಾಗುತ್ತಿದೆ. ಗ್ರಾಮ ಸ್ವರಾಜ್ ಯೋಜನೆ ಜಾರಿಗೊಳಿಸಲಾದ ಗ್ರಾಮಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ಎಲ್.ಇ.ಡಿ. ಬಲ್ಬ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಅರುಣಕುಮಾರ ಸಂಗಾವಿ, ಲೀಡ್ ಬ್ಯಾಂಕ್ ಮ್ಯಾನೇಜರ್, ಎಲ್ಲ ತಾಲೂಕುಗಳ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಎಲ್.ಪಿ.ಜಿ. ಗ್ಯಾಸ್ ವಿತರಕರು ಮತ್ತಿತರರು ಪಾಲ್ಗೊಂಡಿದ್ದರು.