Advertisement

ಸಮರ್ಪಕ ಪಡಿತರ ವಿತರಿಸಲು ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಆಗ್ರಹ

01:11 PM Dec 31, 2017 | Team Udayavani |

ಕವಿತಾಳ: ರಾಯಚೂರಿ ನಿಂದ ಮಸ್ಕಿಗೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅವರನ್ನು ರಸ್ತೆ ಮಧ್ಯದಲ್ಲಿ
ತೆಡೆದ ಬಸಾಪುರ ಗ್ರಾಮಸ್ಥರು, ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕ ಪಡಿತರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Advertisement

ಕಳೆದ ನಾಲ್ಕು ತಿಂಗಳಿಂದ ಪಡಿತರ ಆಹಾರಧಾನ್ಯವನ್ನು ಅಸಮರ್ಪಕವಾಗಿ ವಿತರಿಸುತ್ತಿದ್ದಾರೆ. ಈ ಕುರಿತು ಹಲವು
ಬಾರಿ ಆಹಾರ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಯಾವುದೆ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳು ಆಹಾರ ಇಲಾಖೆ ಶಿರಸ್ತೇದಾರ ಅಮರೇಶ ಅವರಿಗೆ ಮೊಬೈಲ್‌ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು. ಎರಡು ತಾಸು ತಡವಾಗಿ ಆಗಮಿಸಿದ ಶಿರಸ್ತೇದಾರ ಅಮರೇಶ ಮತ್ತು ಗ್ರಾಮ
ಲೆಕ್ಕಾಧಿಕಾರಿ ಸದಾಕಲಿ ಅವರನ್ನು ಜಿಲ್ಲಾಧಿಕಾರಿಗಳು ತೀವ್ರ ತರಾಟೆಗೆ ತೆಗೆದುಕೊಂಡರು.

ಪಡಿತರ ವಿತರಣಾ ಕೇಂದ್ರದ ಪರವಾನಗಿಯನ್ನು ಕೂಡಲೇ ರದ್ದುಗೊಳಿಸಿ, ವ್ಯವಸ್ಥಾಪಕರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಈ ಕುರಿತು ತಕ್ಷಣ ತಮಗೆ ಲಿಖೀತ ವರದಿ ನೀಡುವಂತೆ ಕಟ್ಟುನಿಟ್ಟಿನ ಆ‌ದೇಶ ನೀಡಿದರು. ಜಿಲ್ಲಾಧಿಕಾರಿ ತೆರಳಿದ ನಂತರ ಸ್ಥಳಕ್ಕೆ ಆಗಮಿಸಿದ ಆಹಾರ ಇಲಾಖೆ ಉಪನಿರ್ದೇಶಕ ಪ್ರಭಾಕರ ವಾಲ್ಗದ್‌ ಪರಿಶೀಲಿಸಿದರು. ಸಾರ್ವಜನಿಕರು ಅಧಿಕಾರಿಗಳ ಮಧ್ಯ ವಾಗ್ವಾದ ನಡೆಯಿತು. ಗ್ರಾಮದ ಮುಖಂಡರು, ಯುವಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next