ದಾವಣಗೆರೆ: ಗ್ರಾಮೀಣ ಜನರಿಗೆ ಒಂದೇ ಸೂರಿನಡಿ ಸೇವೆಗಳನ್ನು ಒದಗಿಸಲು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ “ಗ್ರಾಮ ಒನ್’ ಯೋಜನೆಯನ್ನು ಪ್ರಾಯೋಗಿಕವಾಗಿ ಯಶಸ್ವಿಗೊಳಿಸಿದ ದಾವಣಗೆರೆ ಜಿಲ್ಲೆಯಿಂದಲೇ ಅಧಿಕೃತವಾಗಿ ಆರಂಭಿಸಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆ.
ಮೊದಲ ಹಂತದಲ್ಲಿ ಉಡುಪಿ ಸೇರಿದಂತೆ ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ “ಗ್ರಾಮ ಒನ್’ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಜ. 26ರಂದು ದಾವಣಗೆರೆಯ ಮಾಯಕೊಂಡದಲ್ಲಿ ಚಾಲನೆ ನೀಡಲಿದ್ದಾರೆ.
ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಆರಂಭಿಸಿದ ಗ್ರಾಮ ಒನ್ ಕೇಂದ್ರಗಳು ಜನೋಪಯೋಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 3,000 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಸರಕಾರ ಮುಂದಾಗಿದೆ.
ಇದನ್ನೂ ಓದಿ:ಕೋವಿಡ್ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್
Related Articles
ಏನೇನು ಸೇವೆಗಳು ಲಭ್ಯ?
ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಹಿರಿಯ ನಾಗರಿಕರ ಗುರುತಿನ ಚೀಟಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್, ಕಾರ್ಮಿಕ ಇಲಾಖೆ ಸೇವೆಗಳು, ರಾಜ್ಯ ಪೊಲೀಸ್ ಇಲಾಖೆ ಸೇವೆಗಳು, ಕೃಷಿ ಇಲಾಖೆ ಸೇವೆಗಳು, ರೇಷ್ಮೆ ಇಲಾಖೆ ಸೇವೆಗಳು, ಪಶುಸಂಗೋಪನೆ ಇಲಾಖೆ ಸೇವೆಗಳು, ಮಾಹಿತಿ ಹಕ್ಕು ಕಾಯ್ದೆ ಸೇವೆಗಳು, ಸಿಎಂ ಪರಿಹಾರ ನಿಧಿ ಸೇವೆಗಳು ಸೇರಿದಂತೆ 750ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಗ್ರಾಮದಲ್ಲಿಯೇ ನೀಡುವ ಗುರಿ ಹೊಂದಿದ್ದು ಪ್ರಸ್ತುತ ಪ್ರತಿ ಕೇಂದ್ರದಲ್ಲಿ 400ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿದೆ.