Advertisement
ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯ ಚುನಾವಣೆ ಆಯೋಗ ಕೆಲವು ನಿರ್ದೇಶನ ನೀಡಿದೆ. ಅದರಂತೆ ಜಿಲ್ಲಾಡಳಿತಹಾಗೂ ತಾಲೂಕು ಆಡಳಿತ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಂಡಿವೆ. ಚುನಾವಣೆ ಪಕ್ಷ ರಹಿತ ಆಗಿರುವುದರಿಂದ ಹಾಗೂ ಕ್ಷೇತ್ರದ ವ್ಯಾಪ್ತಿಯು ಬಹಳ ಚಿಕ್ಕದಿರುವುದರಿಂದ ಅಭ್ಯರ್ಥಿಗಳ ಪ್ರಚಾರವು ಕ್ಷೇತ್ರಕ್ಕೆ ಸೀಮಿತವಾಗಿರುತ್ತದೆ. ಕಡಿಮೆಬೆಂಬಲಿಗರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡುಮನೆ-ಮನೆಗೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕೆಂದು ಸೂಚಿಸಿದ್ದಾರೆ. ಆದಷ್ಟು ಎಲೆಕ್ಟ್ರಾನಿಕ್ ಮೀಡಿಯಾದಲ್ಲೂ ಪ್ರಚಾರ ಮಾಡಬಹುದು. ಅಭ್ಯರ್ಥಿಗಳು ಪ್ರಚಾರಕ್ಕಾಗಿನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಕರಪತ್ರ ಹಂಚುವವರು ಸಹ ಕಡ್ಡಾಯವಾಗಿ ಫೇಸ್ ಮಾಸ್ಕ್,ಹ್ಯಾಂಡ್ ಗ್ಲೌಸ್ ಧರಿಸಬೇಕು. ಹ್ಯಾಂಡ್ ಸ್ಯಾನಿಟೈಸರ್‌ಉಪಯೋಗಿಸಬೇಕು. ಗುಂಪು-ಗುಂಪಾಗಿ ಪ್ರಚಾರ ಮಾಡುವಂತಿಲ್ಲ. ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.
Related Articles
Advertisement
ಕೋವಿಡ್ ಸೋಂಕಿತರು ಹಾಗೂ ಮತದಾನದ ದಿನ ತಪಾಸಣೆಯಿಂದ ಪತ್ತೆಯಾದ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಛಿಸಿದಲ್ಲಿ ಈ ಬಗ್ಗೆ ರಿಟರ್ನಿಂಗ್ ಅಧಿ ಕಾರಿಗಳು ಅಥವಾ ಆರೋಗ್ಯ ಅಧಿಕಾರಿಗಳಿಗೆ ಲಿಖೀತ ಮನವಿ ಸಲ್ಲಿಸಬೇಕು. ಆರೋಗ್ಯ ಅಧಿ ಕಾರಿಗಳು ಮತದಾನ ಮಾಡಲು ಸಮ್ಮತಿ ನೀಡಿದಲ್ಲಿ ಸೋಂಕಿತರು ಹಾಗೂ ಶಂಕಿತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಆರೋಗ್ಯ ಸಿಬ್ಬಂದಿ ಮತದಾನ ಮಾಡಿಸಬೇಕು. ನಂತರ ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಬೇಕು. ಪ್ರತಿ ಮತಗಟ್ಟೆ ಹೊರಗಡೆ ಆರೋಗ್ಯ ಇಲಾಖೆ ಸಿಬ್ಬಂದಿ ಮತದಾರರನ್ನು ಥರ್ಮಲ್ ಸ್ಕ್ಯನರ್ ಮೂಲಕ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.