Advertisement
ನವೆಂಬರ್ ಕೊನೇ ವಾರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವುದಾಗಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಸಂಭಾವ್ಯ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗ ಹೇಳಿತ್ತು. ಈ ಮಧ್ಯೆ ಮೂರು ವಾರಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್ ನ.13ಕ್ಕೆ ಆದೇಶಿಸಿದೆ.
Related Articles
Advertisement
90 ಸಾವಿರ ಸದಸ್ಯ ಸ್ಥಾನಗಳಿಗೆ ಚುನಾವಣೆ : 2015ರಲ್ಲಿ 176 ತಾಲೂಕುಗಳ 5,855 ಗ್ರಾಪಂಗಳಿಗೆ 2 ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗಿತ್ತು. ಈಗ 226 ತಾಲೂಕುಗಳ 5,800 ಗ್ರಾಪಂಗಳ 35 ಸಾವಿರ ಕ್ಷೇತ್ರಗಳ 93 ಸಾವಿರಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದೆ. ಇದಕ್ಕಾಗಿ ಸಾಮಾನ್ಯ ಪರಿಸ್ಥಿತಿಯಲ್ಲಿ 40 ಸಾವಿರ ಮತಗಟ್ಟೆಗಳು ಸ್ಥಾಪಿಸಬೇಕಾಗುತ್ತದೆ. 2 ಲಕ್ಷ ಚುನಾವಣಾ ಸಿಬ್ಬಂದಿ ಬೇಕು. ಆದರೆ,ಕೋವಿಡ್ ಹಿನ್ನೆಲೆಯಲ್ಲಿ10 ಸಾವಿರ ಹೆಚ್ಚುವರಿ ಮತಗಟ್ಟೆಗಳು ಸ್ಥಾಪಿಸಬೇಕು, ಅದಕ್ಕೆ ತಕ್ಕಂತೆ 50 ಸಾವಿರ ಹೆಚ್ಚುವರಿ ಚುನಾವಣಾ ಸಿಬ್ಬಂದಿ, 10 ಸಾವಿರ ಪೊಲೀಸ್ ಸಿಬ್ಬಂದಿ, 50 ಸಾವಿರ ಆರೋಗ್ಯ ಕಾರ್ಯಕರ್ತೆಯರು ಬೇಕು. ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆಗೆ 35 ಕೋಟಿ, ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲು20ಕೋಟಿ ಹಾಗೂ ಸಾರಿಗೆ ವ್ಯವಸ್ಥೆಗೆ10ಕೋಟಿ ಸೇರಿ ಹೆಚ್ಚುವರಿಯಾಗಿ 65 ಕೋಟಿ ರೂ. ಬೇಕಾಗುತ್ತದೆ ಎಂದು ಆಯೋಗ ಲೆಕ್ಕಚಾರ ಹಾಕಿದೆ. ಚುನಾವಣೆ ನಡೆಸಲು ಅಯೋಗವು ಸರ್ಕಾರಕ್ಕೆ 250ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿತ್ತು.
ಗ್ರಾಪಂ ಚುನಾವಣೆಗೆ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು. –ಡಾ. ಬಿ. ಬಸವರಾಜು, ರಾಜ್ಯ ಚುನಾವಣಾ ಆಯುಕ್ತ