Advertisement

ಲಂಚ ಪಡೆಯುತ್ತಿದ್ದ ಗುಡಸ ಗ್ರಾ.ಪಂ. ಕ್ಲರ್ಕ್ ಎಸಿಬಿ ಬಲೆಗೆ

02:27 PM Sep 27, 2021 | Team Udayavani |

ಬೆಳಗಾವಿ: ಹುಕ್ಕೇರಿ ತಾಲೂಕಿನ ಗುಡಸ ಗ್ರಾಮ ಪಂಚಾಯತ್ ನ ಕ್ಲರ್ಕ್ ಒಬ್ಬರು ಲಂಚ‌ ಪಡೆಯುವಾಗ ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

Advertisement

ಪಂಚಾಯತಿ ಕ್ಲರ್ಕ್ ಹಾಗೂ ಬಿಲ್ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಿದಗೌಡ ಬಸವಣ್ಣಿ ನೇರ್ಲಿ ಅವರು 7,400 ರೂ.‌ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಇವರು ಆಸ್ತಿ ರಿಜಿಸ್ಟರ್ ನಲ್ಲಿ ಅರ್ಜಿದಾರರೊಬ್ಬರ ವಾರಸಾ ಹೆಸರು ದಾಖಲಿಸಲು ರೂ.7,400 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಅರ್ಜಿದಾರ ಭೀಮಪ್ಪ ಕಲಕುಟಗಿ ಎಸಿಬಿಗೆ ದೂರು ಸಲ್ಲಿಸಿದ್ದರು. ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ಕೋಟ: ನದಿಯಲ್ಲಿ ಮುಳುಗಿ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿ ಸಾವು

ಎಸಿಬಿ ಎಸ್ಪಿ ಬಿ.ಎಸ್. ನ್ಯಾಮಗೌಡರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ‌ ನಡೆಸಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next