Advertisement

ಗ್ರಾಮ ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಚುನಾವಣಾ ಆಯೋಗದಿಂದ ಅಧಿಸೂಚನೆ ಪ್ರಕಟ

10:39 PM Mar 08, 2021 | Team Udayavani |

ಬೆಂಗಳೂರು : ಮೇ ತಿಂಗಳಿಗೆ ಅವಧಿ ಮುಕ್ತಾಯವಾಗಲಿರುವ ರಾಜ್ಯದ 68 ಗ್ರಾಮ ಪಂಚಾಯತ್‌ಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 669 ಗ್ರಾ.ಪಂ. ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

Advertisement

ಈ ಚುನಾವಣೆಗಳಿಗೆ ಜಿಲ್ಲಾಧಿಕಾರಿಗಳು ಮಾ.15ರಂದು ಅಧಿಸೂಚನೆ ಪ್ರಕಟಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಮಾ.19 ಕೊನೆ ದಿನವಾಗಿದ್ದು, ಮಾ.20ರಂದು ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮಾ.22 ಕೊನೆ ದಿನವಾಗಿದೆ. ಮಾ.29ರಂದು ಮತದಾನ ನಡೆಯಲಿದ್ದು, ಮಾ.30ರಂದು ಮತ ಎಣಿಕೆ ನಡೆದು ಫ‌ಲಿತಾಂಶ ಹೊರಬೀಳಲಿದೆ. ಚುನಾವಣೆ ನಡೆಯುವ ಪಂಚಾಯತ್‌ಗಳಲ್ಲಿ ಮಾ.15ರಿಂದ 31ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಆಯೋಗ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ
ಮೈಸೂರು ಜಿಲ್ಲೆ ಸರಗೂರು ಪಟ್ಟಣ ಪಂಚಾಯತ್‌ ಮತ್ತು ತುಮಕೂರು ಜಿಲ್ಲೆಯ ಹುಳಿಯಾರು ಪಟ್ಟಣ ಪಂಚಾಯತ್‌ಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 27 ವಾರ್ಡ್‌ಗಳ ಚುನಾವಣೆಗೂ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಅದರಂತೆ, ಮಾ.10ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ಮಾ.17 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಮಾ. 18ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆಯಲು ಮಾ.20 ಕೊನೆ ದಿನವಾಗಿದೆ. ಮಾ.29ರಂದು ಮತದಾನ ನಡೆಯಲಿದ್ದು, ಮಾ.30ರಂದು ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next