Advertisement

ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ: ಚುನಾವಣಾ ಆಯೋಗದಿಂದ ಪ್ರಕಟಣೆ

06:52 PM May 28, 2020 | sudhir |

ಬೆಂಗಳೂರು: ಕೋವಿಡ್ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

Advertisement

ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಿದೆ. ಪ್ರಸ್ತುತ ಪರಿಸ್ಥಿತಿಯನ್ನು “ಅಸಾಧಾರಣ ಪರಿಸ್ಥಿತಿ” ಎಂದು ಪರಿಗಣಿಸಿ ಸಂವಿಧಾನದ ಪರಿಚ್ಛೇದ 243-ಕೆ ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲು ತೀರ್ಮಾನಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲಕೋಕಿಸಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿನ 6,025 ಗ್ರಾಮ ಪಂಚಾಯಿತಿಗಳಲ್ಲಿ 2020ರ ಜೂನ್ ತಿಂಗಳಿಂದ ಆಗಸ್ಟ್ ತಿಂಗಳವರೆಗೆ 5,800 ಗ್ರಾಮ ಪಂಚಾಯಿತಿಗಳಿಗೆ ಅವಧಿಮುಗಿಯಲಿದ್ದು, ಅದಕ್ಕಾಗಿ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಿ ಆಡಳಿತ ಸಮಿತಿ ನೇಮಕ ಮಾಡುವ ನಿರ್ಧಾರಕ್ಕೆ ಸರ್ಕಾರ ಬಂದಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next