ಶಿಡ್ಲಘಟ್ಟ: ಸರ್ಕಾರಿ ಯೋಜನೆಗಳನ್ನು ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳಿಸುವ ಜವಾಬ್ದಾರಿ ಹೊಂದಿರುವ ಗ್ರಾಪಂ ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನವಿಲ್ಲದೇ ಪರದಾಡು ವಂತಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪರಿಸರ ಹಾಗೂ ನೈರ್ಮಲ್ಯ ಕಾಪಾಡಲು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿ ಸಲು ಹಗಲಿರುಳು ಶ್ರಮಿಸುತ್ತಿರುವ ಕರ ವಸೂಲಿಗಾರ, ಗಣಕಯಂತ್ರ ನಿರ್ವಾ ಹಕ, ಹಮಾಲಿ, ಜವಾನ್ ಮತ್ತು ನೀರು ಗಂಟಿಗಳು ಕಳೆದ 8 ತಿಂಗಳಿಂದ ವೇತನ ವಿಲ್ಲದೇ ಪರದಾಡುವಂತಾಗಿದ್ದು, ಕುಟುಂಬ ನಿರ್ವಹಣೆಗೆ ಸಾಲ ಮಾಡಿ ಸಾಲಗಾರರ ಕಾಟಕ್ಕೆ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಗ್ರಾಪಂನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸಕಾಲ ದಲ್ಲಿ ವೇತನ ಪಾವತಿಸಲು ಸರ್ಕಾರ ಜಿಲ್ಲಾ ಪಂಚಾಯಿಗಳಿಂದ ಆದೇಶ ಹೊರಡಿಸಿದರೂ ಸಹ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಯಾಗದಿರುವುದರಿಂದ ಕುಟುಂಬ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.
Advertisement
ತಾಲೂಕಿನ 28 ಗ್ರಾಮ ಪಂಚಾಯಿತಿ ಗಳ 336 ಸಿಬ್ಬಂದಿಗೆ ಕಳೆದ 8 ತಿಂಗಳಿಂದ ವೇತನವಿಲ್ಲದೇ ಪರದಾಡುವಂತಾಗಿದೆ ಎಂದು ದೂರು ಕೇಳಿ ಬರುತ್ತಿದ್ದು, ಇದರಿಂದ ಶೀಘ್ರವೇ ಆರಂಭವಾಗುವ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಸಿಬ್ಬಂದಿ ಸಂಕಷ್ಟ ಎದುರಿಸುವಂತಾಗಿದೆ.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಕಳೆದ 4 ತಿಂಗಳಿಂದ ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ. ಈ ತಿಂಗಳು 23ಕ್ಕೆ ನೀತಿ ಸಂಹಿತಿ ಅಂತ್ಯಗೊಂಡ ಬಳಿಕ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. 8 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂಬುದೆಲ್ಲಾ ಸುಳ್ಳು.
●ಶಿವಕುಮಾರ್, ತಾಪಂ ಇಒ
ಗ್ರಾಮ ಪಂಚಾಯಿತಿ ನೌಕರರಿಗೆ ಕಳೆದ 8 ತಿಂಗಳಿಂದ ವೇತನ ಪಾವತಿಯಾಗದೆ ಒಪ್ಪತ್ತಿನ ಊಟಕ್ಕಾಗಿ ಪರದಾಡುವಂತಾಗಿದೆ. ಸರ್ಕಾರದ ಯೋಜನೆಗಳ ಯಶಸ್ವಿಗೆ ದುಡಿಯುತ್ತಿರುವ ಸಿಬ್ಬಂದಿಗೆ ವೇತನ ಪಾವತಿಸಲು ಮೀನಾಮೇಷ ಎಣಿಸುತ್ತಿದ್ದು ಸಿಬ್ಬಂದಿಯ ಕಷ್ಟಗಳನ್ನು ಕೇಳುವವರು ಇಲ್ಲದಂತಾಗಿದೆ.
●ಸುದರ್ಶನ್, ಸಿಐಟಿಯು ಸಂಯೋಜಿತ ಗ್ರಾಪಂ ನೌಕರರ ಸಂಘದ ಅಧ್ಯಕ್ಷ