Advertisement

Hunasur: ಲಕ್ಷಾಂತರ ರೂ. ಸಾಲ… ಕ್ರಿಮಿನಾಶಕ ಸೇವಿಸಿ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ

10:39 AM Aug 27, 2024 | Team Udayavani |

ಹುಣಸೂರು: ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತ, ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹರೀನಹಳ್ಳಿಯಲ್ಲಿ ನಡೆದಿದೆ.

Advertisement

ತಾಲೂಕಿನ ಹನಗೋಡು ಹೋಬಳಿಯ ಹರೀನಹಳ್ಳಿ ಗ್ರಾಮದ ಕುಮಾರಸ್ವಾಮಿ (55) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕಾಂಗ್ರೆಸ್ ಮುಖಂಡರಾಗಿದ್ದ ಇವರು ಹುಣಸೂರು ತಾಲೂಕು ಕರ್ಣಕುಪ್ಪೆ ಗ್ರಾಮ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ಪ್ರಸ್ತುತ ತಾಲೂಕು ಗ್ರಾ.ಪಂ.ಸದಸ್ಯರ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಕೃಷಿ ಚಟುವಟಕೆಗಾಗಿ ಇವರು ವಿವಿಧ ಬ್ಯಾಂಕ್‌ಗಳಲ್ಲಿ ಸುಮಾರು 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಸಾಲದ ಒತ್ತಡ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆಂದು ಪತ್ನಿ ಸುಮಿತ್ರಾ ರಾತ್ರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Suspension: ಯುವತಿ ಖಾತೆಗೆ ಸರ್ಕಾರದ ಹಣ ವರ್ಗಾವಣೆ ಆರೋಪ; ಕಳಸ ಅರಣ್ಯ ಇಲಾಖೆ DRFO ಅಮಾನತು

Advertisement

Udayavani is now on Telegram. Click here to join our channel and stay updated with the latest news.