Advertisement

ವಿಕಲಸ್ನೇಹಿ ಶೌಚಾಲಯ ನಿರ್ಮಿಸಲು ಸೂಚನೆ

03:49 PM Oct 09, 2020 | Suhan S |

ಚಿಕ್ಕಬಳ್ಳಾಪುರ: ಜಿಲ್ಲೆಯ ಸರ್ಕಾರಿ ಕಚೇರಿಗಳು ಮತ್ತು ಗ್ರಾಪಂ ಗಳಲ್ಲಿ ವಿಕಲಚೇತನರಿಗೆ ಅನುಕೂಲ ಕಲ್ಪಿಸಲು ವಿಕಲಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಬೇಕೆಂದು ಜಿಪಂ ಸಿಇಒ ಪಿ.ಶಿವಶಂಕರ್‌ ಸೂಚನೆ ನೀಡಿದರು.

Advertisement

ಶಿಡ್ಲಘಟ್ಟ ತಾಪಂ ಸಭಾಂಗಣದಲ್ಲಿ ನಡೆದ ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ವಿಕಲ ಚೇತನರಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆಅವರಿಗೆ ಮೂಲ ಸೌಲಭ್ಯಗಳಾದ ಕುಡಿಯುವ ನೀರು ಪೂರೈಕೆ ಮಾಡಿ ಸರ್ಕಾರಿ ಕಚೇರಿಗಳಲ್ಲಿ ವಿಕಲಸ್ನೇಹಿ ಶೌಚಾಲಯಗಳನ್ನು ನಿರ್ಮಿಸಬೇಕೆಂದರು.

ಬಚ್ಚಲುಗುಂಡಿ ನಿರ್ಮಿಸಿ: ಉದ್ಯೋಗ ಖಾತ್ರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಪ್ರತಿ ಗ್ರಾಪಂನಲ್ಲಿ ಬಚ್ಚಲುಗುಂಡಿ ನಿರ್ಮಿಸಲು ಕ್ರಮ ಕೈಗೊಂಡು ಪಂಚಾಯಿತಿವ್ಯಾಪ್ತಿಗೆ ಬರುವ ಒಂದು ಗ್ರಾಮವನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಿಕೊಂಡು ಶೇ.100 ರಷ್ಟು ಬಚ್ಚಲುಗುಂಡಿ ನಿರ್ಮಿಸಲು ಕ್ರಮಕೈಗೊಳ್ಳಬೇಕೆಂದರು.

ಕೋವಿಡ್ ಸಂಕಷ್ಟದಲ್ಲಿಕಾರ್ಮಿಕರಿಗೆ ಉದ್ಯೋಗ ನೀಡಲು ನರೇಗಾ ಸಹಕಾರಿಯಾಗಿದ್ದು, ಈ ಯೋಜನೆಯಡಿ ಕೂಲಿಗಾಗಿ ವಲಸೆ ಹೋಗುವುದನ್ನು ತಪ್ಪಿಸಿ ಈ ಯೋಜನೆ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಅದರಲ್ಲಿ ಶೇ.60ರಷ್ಟು ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಆದ್ಯತೆ ನೀಡಬೇಕೆಂದರು.

ನರೇಗಾ ಯೋಜನೆ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಸಲುವಾಗಿ ರೈತರ ಗ್ರಾಮಸಭೆ ನಡೆಸಿ ರೈತರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕೆಂದು ಆದೇಶಿಸಿದರು. ನರೇಗಾ ಯೋಜನೆ, ಗ್ರಾಮ ನೈರ್ಮಲ್ಯ ಮತ್ತು ಆಡಳಿತಾತ್ಮಕ ವಿಷಯಗಳನ್ನು ಇಲಾಖೆಯ ತಂತ್ರಾಂಶದಲ್ಲಿ ಅಪ್‌ಲೋಡ್‌ ಮಾಡಿದ ಶಿಡ್ಲಘಟ್ಟ ತಾಲೂಕಿನ ಇ-ತಿಮ್ಮಸಂದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ ಬಂದಿರುವುದಕ್ಕೆ ಪಂಚಾಯಿತಿ ಪಿಡಿಒ ತನ್ವೀರ್‌ ಅಹಮದ್‌ ಅವರನ್ನು ಅಭಿನಂದಿಸಿದರು.

Advertisement

ಶಿಡ್ಲಘಟ್ಟ ತಾಲೂಕಿಗೆ ಪ್ರಥಮ ಭೇಟಿ ನೀಡಿದ ಹಿನ್ನೆಲೆಯಲ್ಲಿ ವಿವಿಧ ಗ್ರಾಪಂಗಳ ಆಡಳಿತಾಧಿಕಾರಿಗಳು, ಪಿಡಿಒಗಳು,ಕಾರ್ಯದರ್ಶಿಗಳು, ಮಜಿನರೇಗಾ ತಾಂತ್ರಿಕ ಸಹಾಯಕರ ಪರಿಚಯ ಮಾಡಿಕೊಂಡು ಗ್ರಾಮೀಣ ಅಭಿವೃದ್ಧಿಗಾಗಿ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಕಟಿಸಿದರು. ಜಿಪಂ ಉಪ ಕಾರ್ಯದರ್ಶಿ ಡಾ.ನೋಮೇಶ್‌ ಕುಮಾರ್‌, ಶಿಡ್ಲಘಟ್ಟ ತಾಪಂ ಇಒ ಶಿವಕುಮಾರ್‌, ಮಜಿನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಗ್ರಾಪಂಗಳ ಆಡಳಿತಾಧಿಕಾರಿಗಳು, ಪಿಡಿಒಗಳು, ಕಾರ್ಯದರ್ಶಿಗಳು, ಮಜಿನರೇಗಾ ತಾಂತ್ರಿಕ ಸಹಾಯಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next