Advertisement
ಸೋಮವಾರ ಜಿಪಂ ಕಚೇರಿ ಬಳಿ ದಸಂಸ ಮತ್ತು ಪೌರಕಾರ್ಮಿಕ ಅಸಂಘಟಿತ ಕಾರ್ಮಿಕ ವಿಭಾಗದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಜಿಲ್ಲೆ ವ್ಯಾಪ್ತಿಯ 7 ತಾಲೂಕುಗಳ 236 ಗ್ರಾಪಂಗಳಲ್ಲಿನ ಜನರ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಪೌರಕಾರ್ಮಿಕರರಿಗೆ ಯಾವುದೇ ರೀತಿಯ ಕೆಲಸದ ಭದ್ರತೆ ಇಲ್ಲ. ನೇಮಕಾತಿ ಪ್ರಕ್ರಿಯೆ ಅತ್ಯಾವಶ್ಯಕ. ಈ ಕುರಿತು ಹಲವು ಗೊಂದಲ ಸೃಷ್ಟಿಯಾಗಿವೆ ಎಂದು ಕಿಡಿಕಾರಿದರು.
Related Articles
Advertisement
ವೇತನ ಹೆಚ್ಚಳಕ್ಕೆ ಅಂಗನವಾಡಿ ನೌಕರರ ಪಟ್ಟು :
ಮೈಸೂರು: ಅಂಗನವಾಡಿ ನೌಕರರ ವೇತನವನ್ನು ಕನಿಷ್ಠ 21 ಸಾವಿರಕ್ಕೆ ಏರಿಕೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂತನ ಶಿಕ್ಷಣ ನೀತಿ ಜಾರಿ ಮಾಡುವಾಗ ಬಿಸಿಯೂಟ ಯೋಜನೆ ಬಲಿಷ್ಠಪಡಿಸಿ ಈಗಿರುವ ಮಾದರಿ ಮುಂದುವರಿಸಬೇಕು. ಕೇಂದ್ರೀಕೃತ ಅಡುಗೆ ಕೇಂದ್ರ ಮಾದರಿ ಬೇಡ. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು. ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರದಾಸೋಹ ಕೈಪಿಡಿಯಲ್ಲಿ ಬದಲಾಯಿಸಬೇಕು.
ಕೋವಿಡ್ ಸಂದರ್ಭದ ವೇತನ ಏಪ್ರಿಲ್‌ನಿಂದಲೇಕೊಡಬೇಕು. ಬಿಸಿಯೂಟ ನೌಕರರಿಗೆ ಪ್ರತಿ ತಿಂಗಳು 5ನೇ ತಾರೀಖೀನ ಒಳಗೆ ವೇತನ ಪಾವತಿಯಾಗಬೇಕು. ಬಿಸಿಯೂಟ ಮಹಿಳೆಯರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯವರು ಇರಲೇಬೇಕು. ನಿವೃತ್ತಿ ವೇತನ, ಆರೋಗ್ಯ ಸೌಲಭ್ಯ ಒದಗಿಸಬೇಕೆಂದರು. ಸಿಐಟಿಯು ಜಿಲ್ಲಾಧ್ಯಕ್ಷ ಬಾಲಾಜಿರಾವ್, ಪ್ರ.ಕಾರ್ಯದರ್ಶಿ ಜಯರಾಂ ಇದ್ದರು.